ADVERTISEMENT

ಜಾಕ್ ಎಡ್ವರ್ಡ್ಸ್‌ ಇನ್ನಿಲ್ಲ

ಏಜೆನ್ಸೀಸ್
Published 6 ಏಪ್ರಿಲ್ 2020, 20:00 IST
Last Updated 6 ಏಪ್ರಿಲ್ 2020, 20:00 IST

ವೆಲಿಂಗ್ಟನ್: ಸ್ಫೋಟಕ ಹೊಡೆತ ಗಳ ಆಟಗಾರ, ನ್ಯೂಜಿಲೆಂಡ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿದ್ದ ಜಾಕ್ ಎಡ್ವರ್ಡ್ಸ್‌ (64) ಸೋಮವಾರ ನಿಧನರಾದರು.

ಆರು ಟೆಸ್ಟ್ ಮತ್ತು ಎಂಟು ಏಕದಿನ ಪಂದ್ಯಗಳನ್ನು ಆಡಿರುವ ಜಾಕ್ ಅವರು ಸೆಂಟ್ರಲ್ ಡಿಸ್ಟ್ರಿಕ್ಟ್ಸ್‌ ಪ್ರಾವಿನ್ಸ್ ಪರವಾಗಿ 1974ರಿಂದ 1985ರ ಅವಧಿಯಲ್ಲಿ 67 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. 1978ರಲ್ಲಿ ಆಕ್ಲೆಂಡ್‌ನಲ್ಲಿ ನಡೆದಿದ್ದ ಇಂಗ್ಲೆಂಡ್ ಎದುರಿನ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಅರ್ಧಶತಕ ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT