ADVERTISEMENT

ಬಿಸಿಸಿಐ ನೀತಿ ಸಂಹಿತೆ ಅಧಿಕಾರಿಯಾಗಿ ವಿನೀತ್‌ ಸರನ್ ಅಧಿಕಾರ ಸ್ವೀಕಾರ

ಪಿಟಿಐ
Published 19 ಜುಲೈ 2022, 14:15 IST
Last Updated 19 ಜುಲೈ 2022, 14:15 IST
ಬಿಸಿಸಿಐ
ಬಿಸಿಸಿಐ   

ನವದೆಹಲಿ: ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿನೀತ್‌ ಸರನ್‌ ಅವರು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಒಂಬುಡ್ಸ್‌ಮನ್‌ ಮತ್ತು ನೀತಿ ಸಂಹಿತೆ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ಧಾರೆ.

ನ್ಯಾಯಮೂರ್ತಿ ಡಿ.ಕೆ.ಜೈನ್‌ ಅವರಿಂದ ತೆರವಾದ ಸ್ಥಾನವನ್ನು ಸರನ್‌ ತುಂಬಿದ್ದಾರೆ. ಜೈನ್‌ ಅವರ ಅಧಿಕಾರದ ಅವಧಿ ಕಳೆದ ವರ್ಷ ಜೂನ್‌ನಲ್ಲಿ ಕೊನೆಗೊಂಡಿತ್ತು. ಒಂದು ವರ್ಷದ ಅವಧಿಯಿಂದ ಈ ಎರಡು ಹುದ್ದೆಗಳು ಖಾಲಿಯಿದ್ದವು.

‘‌ನ್ಯಾಯಮೂರ್ತಿ ಸರನ್‌ ಅವರ ನೇಮಕ ಕಳೆದ ತಿಂಗಳು ನಡೆದಿದೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

65 ವರ್ಷದ ಸರನ್ ಅವರು ಕರ್ನಾಟಕ ಮತ್ತು ಅಲಹಾಬಾದ್‌ ಹೈಕೋರ್ಟ್‌ಗಳಲ್ಲಿ ನ್ಯಾಯಮೂರ್ತಿಯಾಗಿ, ಒಡಿಶಾ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.

ಬಿಸಿಸಿಐ ಸಭೆ ನಾಳೆ: 2022–23ರ ಋತುವಿಗೆ ದೇಸಿ ಕ್ರಿಕೆಟ್‌ ಟೂರ್ನಿಗಳ ವೇಳಾಪಟ್ಟಿ ಸಿದ್ಧಪಡಿಸುವುದು ಮತ್ತು ಭಾರತದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಪಂದ್ಯಗಳ ಮಾಧ್ಯಮ ಪ್ರಸಾರ ಹಕ್ಕು ಹರಾಜಿಗೆ ಸಂಬಂಧಿಸಿದಂತೆ ಚರ್ಚಿಸಲು ಗುರುವಾರ ಬಿಸಿಸಿಐ ಆಡಳಿತ ಮಂಡಳಿ ಸಭೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.