ADVERTISEMENT

ಐಪಿಎಲ್‌ ಮುಂದುವರಿಸಬೇಕೇ? ಬೇಡವೇ? ಎಂಬುದು ಸರ್ಕಾರ ಹೇಳಿದ ಮೇಲೆ ನಿರ್ಧಾರ– ಧುಮಾಲ್

​ಪ್ರಜಾವಾಣಿ ವಾರ್ತೆ
Published 9 ಮೇ 2025, 0:25 IST
Last Updated 9 ಮೇ 2025, 0:25 IST
<div class="paragraphs"><p>ಐಪಿಎಲ್‌ ಲೋಗೊ</p></div>

ಐಪಿಎಲ್‌ ಲೋಗೊ

   

ಧರ್ಮಶಾಲಾ: ‘ಗಡಿಯಲ್ಲಿ ಸಂಘರ್ಷದ ವಾತಾವರಣ ಇರುವುದರಿಂದ ಹಾಲಿ ಐಪಿಎಲ್‌ ಲೀಗ್‌ ಮುಂದುವರಿಸಬೇಕೇ ಎಂದು ನಿರ್ಧರಿಸಲು ಸರ್ಕಾರದ ನಿರ್ದೇಶನಕ್ಕಾಗಿ ಕಾಯಲಾಗುತ್ತಿದೆ’ ಎಂದು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಗುರುವಾರ ಹೇಳಿದರು.

ಶುಕ್ರವಾರದ ಪಂದ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಲಖನೌ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ನಿಗದಿಯಂತೆ ನಡೆಯಲಿದೆ’ ಎಂದು ಇದೇ ವೇಳೆ ತಿಳಿಸಿದರು.

ADVERTISEMENT

‘ಸದ್ಯದ ಪರಿಸ್ಥಿತಿಯನ್ನು ನಾವು ಪರಿಶೀಲಿಸುತ್ತಿದ್ದೇವೆ. ಕೇಂದ್ರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ. ಆಟಗಾರರ ಸುರಕ್ಷತೆ ಸೇರಿದಂತೆ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದು ಸ್ಪಷ್ಟ’ ಎಂದು ಪಿಟಿಐಗೆ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.