ADVERTISEMENT

ಕುಟುಂಬ ಸದಸ್ಯರಿಗೆ ಕೋವಿಡ್‌: ಪ್ರತ್ಯೇಕವಾಸದ ಮೊರೆ ಹೋದ ಗೌತಮ್‌ ಗಂಭೀರ್‌

ಪಿಟಿಐ
Published 6 ನವೆಂಬರ್ 2020, 13:27 IST
Last Updated 6 ನವೆಂಬರ್ 2020, 13:27 IST
ಗೌತಮ್‌ ಗಂಭೀರ್‌
ಗೌತಮ್‌ ಗಂಭೀರ್‌   

ನವದೆಹಲಿ: ಕುಟುಂಬದ ಸದಸ್ಯರೊಬ್ಬರಿಗೆ ಕೋವಿಡ್‌–19 ದೃಢಪಟ್ಟ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್‌ ಪ್ರತ್ಯೇಕವಾಸದ ಮೊರೆ ಹೋಗಿದ್ದಾರೆ. ತಾವೂ ಸೋಂಕು ಪರೀಕ್ಷೆಗೆ ಒಳಗಾಗಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

ವಿಶ್ವಕಪ್‌ ವಿಜೇತಭಾರತ ತಂಡದ ಸದಸ್ಯರಾಗಿರುವ ಗಂಭೀರ್‌, ಸದ್ಯ ಪೂರ್ವ ದೆಹಲಿ ಲೋಕಸಭಾ ಸದಸ್ಯರೂ ಹೌದು.

‘ಮನೆಯ ಸದಸ್ಯರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ನಾನು ಪ್ರತ್ಯೇಕವಾಸದಲ್ಲಿದ್ದೇನೆ. ನಾನೂ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿಗಾಗಿ ಕಾಯುತ್ತಿದ್ದೇನೆ. ಕೋವಿಡ್‌ಅನ್ನು ಹಗುರವಾಗಿ ಪರಿಗಣಿಸಬೇಡಿ.‍ ಪ್ರತಿಯೊಬ್ಬರು ಮಾರ್ಗಸೂಚಿಗಳನ್ನು ಪಾಲಿಸಿ. ಸುರಕ್ಷಿತವಾಗಿರಿ‘ ಎಂದು ಗಂಭೀರ್‌ ಟ್ವೀಟ್‌ ಮಾಡಿದ್ದಾರೆ.

ADVERTISEMENT

39 ವರ್ಷದ ಗಂಭೀರ್‌, ಭಾರತ ತಂಡದ ಪರ 58 ಟೆಸ್ಟ್‌, 147 ಏಕದಿನ ಹಾಗೂ 37 ಟಿ–20 ಪಂದ್ಯಗಳಲ್ಲಿ ಆಡಿದ್ದಾರೆ.

ದೆಹಲಿ ನಗರದಲ್ಲಿ ಗುರುವಾರ 6,700ಕ್ಕಿಂತ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಒಟ್ಟಾರೆ 4.16 ಲಕ್ಷ ಮಂದಿ ಕೊರೊನಾ ಸೋಂಕಿಗೆ ಒಳಪ‍ಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.