ADVERTISEMENT

ಭಾರತದಲ್ಲೇ ಐಪಿಎಲ್‌ ಆಯೋಜನೆ: ಖಚಿತಪಡಿಸಿದ ಗಂಗೂಲಿ

ಐಎಎನ್ಎಸ್
Published 3 ಫೆಬ್ರುವರಿ 2022, 11:48 IST
Last Updated 3 ಫೆಬ್ರುವರಿ 2022, 11:48 IST
ಸೌರವ್ ಗಂಗೂಲಿ
ಸೌರವ್ ಗಂಗೂಲಿ   

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯು ಭಾರತದಲ್ಲೇ ಆಯೋಜಯಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ.

ಕೋವಿಡ್ ಪ್ರಕರಣಗಳು ಹೆಚ್ಚಳಗೊಂಡು ಗಂಭೀರ ಪರಿಸ್ಥಿತಿ ನಿರ್ಮಾಣವಾಗದ ಹೊರತು ಐಪಿಎಲ್ ಟೂರ್ನಿಯನ್ನು ಭಾರತದಲ್ಲೇ ನಡೆಸಲು ಉದ್ದೇಶಿಸಲಾಗಿದೆ ಎಂದು ಗಂಗೂಲಿ ತಿಳಿಸಿದರು.

ಲೀಗ್ ಹಂತದ ಪಂದ್ಯಗಳನ್ನು ಮಹಾರಾಷ್ಟ್ರದ ಮುಂಬೈ ಹಾಗೂ ಪುಣೆಯಲ್ಲಿ ನಡೆಸಲು ಯೋಜನೆ ಇರಿಸಿಕೊಳ್ಳಲಾಗಿದೆ. ನಾಕೌಟ್ ಹಂತದ ಪಂದ್ಯಗಳ ಕುರಿತು ಬಳಿಕ ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದರು.

ಐಪಿಎಲ್ ಪ್ಲೇ-ಆಫ್ ಸಮಯದಲ್ಲಿ ಮಹಿಳೆಯರ ಟಿ20 ಚಾಲೆಂಜ್ ಟೂರ್ನಿಯನ್ನು ಆಯೋಜಿಸಲಾಗುವುದು ಎಂದವರು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯ:
ಶ್ರೀಲಂಕಾದ ಭಾರತ ಪ್ರವಾಸದ ವೇಳೆ ಬೆಂಗಳೂರಿನಲ್ಲಿ ಹಗಲು-ರಾತ್ರಿ ಪಂದ್ಯವನ್ನು (ಪಿಂಕ್ ಬಾಲ್ ಟೆಸ್ಟ್) ಆಯೋಜಿಸಲಾಗುವುದು ಎಂದವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.