ಜೆರಾಲ್ಡ್ ಕೋಝಿ
(ಚಿತ್ರ ಕೃಪೆ: X/@ProteasMenCSA)
ಸೆಂಚುರಿಯನ್: ಭಾರತ ವಿರುದ್ಧ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯಕ್ಕೂ ಮುನ್ನ ಅತಿಥೇಯ ದಕ್ಷಿಣ ಆಫ್ರಿಕಾ ಮತ್ತೊಂದು ಹಿನ್ನಡೆಗೊಳಗಾಗಿದೆ.
ಯುವ ವೇಗದ ಬೌಲರ್ ಜೆರಾಲ್ಡ್ ಕೋಝಿ ಅವರು ಎರಡನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ) ತಿಳಿಸಿದೆ.
ಜೆರಾಲ್ಡ್ ಕೋಝಿ ಮೂತ್ರಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ. ಮೊದಲ ಟೆಸ್ಟ್ ಪಂದ್ಯದ ವೇಳೆಯೇ ಅವರಿಗೆ ಸಮಸ್ಯೆ ಕಾಡಿತ್ತು ಎಂದು ತಿಳಿಸಿದೆ.
ಮೊದಲ ಟೆಸ್ಟ್ ಪಂದ್ಯದಲ್ಲಿ ಕೋಝಿ ಒಂದು ವಿಕೆಟ್ ಗಳಿಸಿದ್ದರು. ದ್ವಿತೀಯ ಇನಿಂಗ್ಸ್‌ನಲ್ಲಿ ಐದು ಓವರ್‌ಗಳನ್ನಷ್ಟೇ ಎಸೆದಿದ್ದರು.
ಜೆರಾಲ್ಡ್ ಕೋಝಿ ಅವರನ್ನು ಸ್ಕ್ಯಾನಿಂಗ್‌ಗೆ ಒಳಪಡಿಸಲಾಗಿದ್ದು, ವಿಶ್ರಾಂತಿಗೆ ಸೂಚಿಸಲಾಗಿದೆ. ಅವರ ಬದಲಿ ಆಟಗಾರನನ್ನು ಸಿಎಸ್‌ಎ ಘೋಷಿಸಿಲ್ಲ.
ಗಾಯದ ಸಮಸ್ಯೆಯಿಂದ ಬಳಲುತ್ತಿರುವ ತೆಂಬಾ ಬವುಮಾ ಅಂತಿಮ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ತಮ್ಮ ವೃತ್ತಿ ಜೀವನದ ಕೊನೆಯ ಟೆಸ್ಟ್ ಪಂದ್ಯ ಆಡುತ್ತಿರುವ ಡೀನ್ ಎಲ್ಗರ್, ತಂಡವನ್ನು ಮುನ್ನಡೆಸಲಿದ್ದಾರೆ.
ಅಂತಿಮ ಟೆಸ್ಟ್ ಪಂದ್ಯವು ಕೇಪ್ ಟೌನ್‌ನಲ್ಲಿ ಜನವರಿ 3ರಂದು ಆರಂಭವಾಗಲಿದೆ.
ಸೆಂಚುರಿಯನ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಇನಿಂಗ್ಸ್ ಹಾಗೂ 32 ರನ್ ಅಂತರದ ಗೆಲುವು ದಾಖಲಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.