
ಗ್ಲೆನ್ ಮ್ಯಾಕ್ಸ್‌ವೆಲ್
ಮೆಲ್ಬರ್ನ್: ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಮಂಗಳವಾರ ನೆಟ್ಸ್‌ನಲ್ಲಿ ಬೌಲಿಂಗ್ ಮಾಡುವಾಗ ಮಿಚೆಲ್ ಓವನ್ ಹೊಡೆದ ಸ್ಟ್ರೈಟ್ ಡ್ರೈವ್‌ನಿಂದಾಗಿ ಮಣಿಕಟ್ಟಿನ ಗಾಯಕ್ಕೆ ಒಳಗಾಗಿದ್ದು, ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ–20 ಸರಣಿಯಿಂದ ಹೊರಗುಳಿಯಲಿದ್ದಾರೆ.
ಮಣಿಕಟ್ಟಿನ ಮುರಿತಕ್ಕೆ ಒಳಗಾಗಿರುವ ಮ್ಯಾಕ್ಸ್‌ವೆಲ್ ಮೌಂಟ್ ಮೌಂಗನುಯಿಯ (Mount Maunganui) ಬೇ ಓವಲ್‌ನಲ್ಲಿ ಬುಧವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ–20 ಸರಣಿಯಿಂದ ಹೊರಗುಳಿಯಲಿದ್ದಾರೆ. ಸದ್ಯ, ಅವರ ಬದಲಿಗೆ ಸಿಡ್ನಿ ಸಿಕ್ಸರ್ಸ್ ಮತ್ತು ನ್ಯೂ ಸೌತ್ ವೇಲ್ಸ್ ತಂಡದ ಪರ ಉತ್ತಮ ಪ್ರದರ್ಶನ ನೀಡಿರುವ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಫಿಲಿಪ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಸರಣಿಗೆ ತಂಡವನ್ನು ಆಯ್ಕೆ ಮಾಡುವುದಕ್ಕೆ ಮೊದಲು ಜೋಶ್ ಇಂಗ್ಲಿಸ್ ಕೂಡ ಗಾಯಗೊಂಡಿದ್ದರು. ಅವರ ಬದಲಿಗೆ ಅನುಭವಿ ಅಲೆಕ್ಸ್ ಕ್ಯಾರಿಯವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಮ್ಯಾಕ್ಸ್‌ವೆಲ್ ಕೂಡ ಗಾಯಗೊಂಡಿರುವುದು ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಉಂಟು ಮಾಡಿದೆ. ಮಾತ್ರವಲ್ಲ, ಬೆನ್ನು ನೋವಿನಿಂದಾಗಿ ವೇಗಿ ಪ್ಯಾಟ್ ಕಮ್ಮಿನ್ಸ್ ಕೂಡ ಆಸ್ಟ್ರೇಲಿಯಾ ತಂಡದಿಂದ ಹೊರಗುಳಿದಿದ್ದಾರೆ.
ವೇಳಾ ಪಟ್ಟಿ
ಮೊದಲ ಪಂದ್ಯ– ಅಕ್ಟೋಬರ್ 1
ಎರಡನೇ ಪಂದ್ಯ ಅಕ್ಟೋಬರ್ 3
ಮೂರನೇ ಪಂದ್ಯ– ಅಕ್ಟೋಬರ್ 4
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.