ADVERTISEMENT

ಹರಭಜನ್ ಸಿಂಗ್ ಸಾಧನೆಯನ್ನು ಕೊಂಡಾಡಿದ ಕ್ರಿಕೆಟ್ ಲೋಕ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2021, 11:38 IST
Last Updated 24 ಡಿಸೆಂಬರ್ 2021, 11:38 IST
ಹರಭಜನ್ ಸಿಂಗ್
ಹರಭಜನ್ ಸಿಂಗ್   

ನವದೆಹಲಿ: 2011ರ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ ಆಫ್ ಸ್ಪಿನ್ನರ್ ಹರಭಜನ್ ಸಿಂಗ್ ಎಲ್ಲ ಪ್ರಕಾರದ ಕ್ರಿಕೆಟ್‌ಗೂ ವಿದಾಯ ಘೋಷಿಸಿದ್ದಾರೆ.

23 ವರ್ಷಗಳ ಸುದೀರ್ಘ ವೃತ್ತಿ ಜೀವನದಲ್ಲಿ ಹರಭಜನ್ ಸಿಂಗ್ ಸಾಧನೆಯನ್ನು ಕ್ರಿಕೆಟ್ ಲೋಕದ ಪ್ರಮುಖರು ಕೊಂಡಾಡಿದ್ದಾರೆ.

ಇದನ್ನೂ ಓದಿ:

2007ರಲ್ಲಿ ಚೊಚ್ಚಲ ಟ್ವೆಂಟಿ-20 ವಿಶ್ವಕಪ್ ಗೆಲುವಿನಲ್ಲೂ ಹರಭಜನ್ ಸಿಂಗ್ ಮಹತ್ವದ ಪಾತ್ರ ವಹಿಸಿದ್ದರು.

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಹರಭಜನ್ ಸಿಂಗ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಭ ಕೋರಿದೆ.

ADVERTISEMENT

ಹರಭಜನ್ ಸಿಂಗ್ ನೈಜ ಹೋರಾಟಗಾರ ಎಂದು ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಬಣ್ಣಿಸಿದ್ದಾರೆ.

ಹರಭಜನ್ ಸಿಂಗ್ ಭಾರತೀಯ ಕ್ರಿಕೆಟ್ ಅಷ್ಟೇ ಅಲ್ಲದೆ ವಿಶ್ವ ಕ್ರಿಕೆಟ್‌ನ ಅತ್ಯುತ್ತಮ ಆಟಗಾರರಲ್ಲಿ ಒಬ್ಬರು. ನಿಮ್ಮೊಂದಿಗೆ ಆಡಲು ಸಾಧ್ಯವಾಗಿರುವುದು ನನಗೆ ಸಂದ ಗೌರವ ಎಂದು ವೇಗದ ಬೌಲರ್ ಎಸ್. ಶ್ರೀಶಾಂತ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.