ADVERTISEMENT

7 ಬೌಂಡರಿ, 4 ಸಿಕ್ಸರ್: ಕಮ್‌ಬ್ಯಾಕ್‌ ಪಂದ್ಯದಲ್ಲಿ ಅಬ್ಬರಿಸಿದ ಹಾರ್ದಿಕ್ ಪಾಂಡ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಡಿಸೆಂಬರ್ 2025, 12:49 IST
Last Updated 2 ಡಿಸೆಂಬರ್ 2025, 12:49 IST
<div class="paragraphs"><p>ಹಾರ್ದಿಕ್ ಪಾಂಡ್ಯ</p></div>

ಹಾರ್ದಿಕ್ ಪಾಂಡ್ಯ

   

(ಪಿಟಿಐ ಚಿತ್ರ)

ಹೈದರಾಬಾದ್: ಎರಡು ತಿಂಗಳ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ ಭಾರತ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಅಜೇಯ 77 ರನ್‌ಗಳಿಸಿ ಬರೋಡಾ ತಂಡದ ಗೆಲುವಿಗೆ ಕಾರಣರಾಗಿದ್ದಾರೆ.

ADVERTISEMENT

ಪಂಜಾಬ್ ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 19 ಎಸೆತಗಳಲ್ಲಿ 50 ರನ್ ಸಿಡಿಸಿದರು. ಆ ಮೂಲಕ ಬರೋಡ ತಂಡ ನಿಗದಿತ 20 ಓವರ್‌ಗಳಲ್ಲಿ 222 ರನ್‌ಗಳ ಟಾರ್ಗೆಟ್ ನೀಡಿದರು.

ಬರೋಡಾ ಪರ ಹಾರ್ದಿಕ್ ಪಾಂಡ್ಯ 42 ಎಸೆತಗಳ 7 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 77 ರನ್‌ ಗಳಿಸಿದರು. ಆ ಮೂಲಕ ಬರೋಡ ತಂಡ 19.1 ಓವರ್‌ಗಳಲ್ಲಿ 224 ರನ್ ಗಳಿಸಿ ಗೆಲುವು ಸಾಧಿಸಿತು.

ಸೆಪ್ಟೆಂಬರ್ 26ರಂದು ಶ್ರೀಲಂಕಾ ವಿರುದ್ಧ ದುಬೈನಲ್ಲಿ ನಡೆದ ಏಷ್ಯಾ ಕಪ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಅದಾದ ಬಳಿಕ ಅವರು ಎಡ ಕ್ವಾಡ್ರೈಸ್ಪ್ ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದರು.

ಬ್ಯಾಟಿಂಗ್ ಮಾತ್ರವಲ್ಲ, ಬೌಲಿಂಗ್‌ನಲ್ಲೂ 4 ಓವರ್‌ ಬಳಿಕ ಹಾರ್ದಿಕ್ 52 ರನ್ ಬಿಟ್ಟುಕೊಟ್ಟು 1 ವಿಕೆಟ್ ಪಡೆದರು. ಅವರ ಈ ಪ್ರದರ್ಶನ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡುವ ಅವಕಾಶವನ್ನು ಹೆಚ್ಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.