ನವದೆಹಲಿ: ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ
ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಈ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.
ಹಾರ್ದಿಕ್ ಪಾಂಡ್ಯ ಹಾಗೂ ಅವರ ಸಹೋದರ ಕೃನಾಲ್ ಪಾಂಡ್ಯಅಮಿತ್ ಶಾ ನಿವಾಸಕ್ಕೆ ತೆರಳಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹಾರ್ದಿಕ್ ಪಾಂಡ್ಯ ನಿಮ್ಮ ಭೇಟಿ ನಮಗೆ ಒಂದು ಸುಯೋಗ ಮತ್ತು ಗೌರವವಾಗಿತ್ತು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.