
ಅಹಮದಾಬಾದ್: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ 5ನೇ ಪಂದ್ಯದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಟಿ–20 ಕ್ರಿಕೆಟ್‌ನಲ್ಲಿ ಭಾರತದ ಪರ 2ನೇ ಅತಿವೇಗದ ಅರ್ಧಶತಕ ಸಿಡಿಸಿದ್ದಾರೆ.
ಸರಣಿಯ ಕೊನೆಯ ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಪಾಂಡ್ಯ, ಮೊದಲನೇ ಎಸೆತದಿಂದಲೇ ಅಬ್ಬರಿಸಲು ಶುರುಮಾಡಿದರು.
ಸ್ಪೋಟಕ ಬ್ಯಾಟಿಂಗ್ ಮೂಲಕ ಕೇವಲ 16 ಎಸೆತಗಳಲ್ಲೇ ಅರ್ಧಶತಕ ದಾಖಲಿಸಿದರು. ಇದು ಭಾರತದ ಪರ ಚುಟುಕು ಕ್ರಿಕೆಟ್‌ನಲ್ಲಿ 2ನೇ ವೇಗದ ಅರ್ಧಶತಕವಾಗಿದೆ.
2007ರ ವಿಶ್ವಕಪ್ ಟೂರ್ನಿಯ ಡರ್ಬನ್ ಪಂದ್ಯದಲ್ಲಿ ಯುವರಾಜ್ ಸಿಂಗ್ ಅವರು ಇಂಗ್ಲೆಂಡ್ ವಿರುದ್ಧ ಕೇವಲ 12 ಎಸೆತಗಳಲ್ಲಿ 50 ರನ್ ಗಳಿಸಿದ್ದು, ಭಾರತದ ಪರ ಚುಟುಕು ಕ್ರಿಕೆಟ್‌ನಲ್ಲಿ ಅತಿವೇಗದ ಅರ್ಧಶತಕವಾಗಿದೆ.
ಹಾರ್ದಿಕ್ ಪಾಂಡ್ಯ ಅವರು ಪಂದ್ಯದಲ್ಲಿ 25 ಎಸೆತದಲ್ಲಿ 63 ರನ್ ( 5 ಬೌಂಡರಿ ಹಾಗೂ 5 ಸಿಕ್ಸರ್) ಗಳಿಸುವ ಮೂಲಕ ತಂಡದ ಮೊತ್ತವನ್ನು 200 ರನ್ ಗಡಿ ದಾಟಿಸಿದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 20 ಓವರ್‌ಗಳ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿದೆ. ಐದು ಪಂದ್ಯಗಳ ಸರಣಿಯಲ್ಲಿ ಭಾರತವು 2–1ರಲ್ಲಿ ಮುಂದಿದ್ದು, ಕೊನೆಯ ಪಂದ್ಯ ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳುವ ಗುರಿಯಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.