ಕರಾಚಿ: ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಆಯೋಜನೆಯನ್ನು ಹೈಬ್ರಿಡ್ ಮಾದರಿಯಲ್ಲಿ ಮಾಡಲು ತಾವು ಸಿದ್ಧವಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ (ಐಸಿಸಿ) ಸ್ಪಷ್ಟಪಡಿಸಿದೆ.
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ನಿಗದಿ ಮಾಡಲು ಕುರಿತು ಶುಕ್ರವಾರ ಐಸಿಸಿ ಸಭೆಯನ್ನು ನಡೆಸಲಾಗುತ್ತಿದೆ. ಅದಕ್ಕೂ ಮುನ್ನ ಪಿಸಿಬಿ ತನ್ನ ನಿಲುವು ತಿಳಿಸಿದೆ.
‘ಕೆಲವು ಗಂಟೆಗಳ ಮುನ್ನವಷ್ಟೇ ಪಿಸಿಬಿ ತನ್ನ ನಿಲುವನ್ನು ಸ್ಪಷ್ಪಪಡಿಸಿದೆ. ಹೈಬ್ರಿಡ್ ಮಾದರಿಯನ್ನು ಒಪ್ಪಲಾಗದೆಂದೂ ಪ್ರತಿಪಾದಿಸಿದೆ‘ ಎಂದು ಮೂಲಗಳು ತಿಳಿಸಿವೆ.
ಭಾರತ ತಂಡವನ್ನು ಪಾಕಿಸ್ತಾನಕ್ಕೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಲು ಕಳುಹಿಸುವುದಕ್ಕೆ ಬಿಸಿಸಿಐಗೆ ಕೇಂದ್ರ ಸರ್ಕಾರವು ಅನುಮತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ತಟಸ್ಥ ಸ್ಥಳದಲ್ಲಿ ಪಂದ್ಯಗಳನ್ನು ನಡೆಸುವ ಸಾಧ್ಯತೆಯನ್ನು ಐಸಿಸಿ ಪರಿಶೀಲಿಸುತ್ತಿದೆ.
‘ಈ ಮುಂಚೆ ಪಿಸಿಬಿ ಕೂಡ ಹೈಬ್ರಿಡ್ ಮಾದರಿಯ ಸಾಧ್ಯತೆಗಳ ಕುರಿತು ಪರಿಶೀಲಿಸಿತ್ತು. ಭವಿಷ್ಯದಲ್ಲಿಯೂ ಐಸಿಸಿ ಟೂರ್ನಿಗಳಲ್ಲಿ ಗೆ ಉಭಯ ದೇಶಗಳಿಗೆ ಇದೇ ಮಾದರಿ ಅನುಸರಿಸಲಾಗುವುದೇ? ಭಾರತ ಮತ್ತು ಬಾಂಗ್ಲಾದೇಶದ ಆತಿಥ್ಯದಲ್ಲಿ 2031ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಅದರಲ್ಲಿ ಆಡಲು ಪಾಕಿಸ್ತಾನ ತಂಡವು ಭಾರತಕ್ಕೆ ಹೋಗುವುದಿಲ್ಲವೆಂದೂ ಹೇಳಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
‘ಬಿಸಿಸಿಐ ಪಾಕಿಸ್ತಾನಕ್ಕೆ ತಂಡವನ್ನು ಕಳುಹಿಸುವುದಿಲ್ಲವೆಂದು ಲಿಖಿತವಾಗಿ ಐಸಿಸಿಗೆ ತಿಳಿಸಿದೆಯೇ’ ಎಂದೂ ಪಿಸಿಬಿ ಪ್ರಶ್ನಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.