ADVERTISEMENT

ಐಪಿಎಲ್‌ಗಿಂತ ರಾಹುಲ್ ಮಾರ್ಗದರ್ಶನದಲ್ಲಿ ಆಡಲು ಉತ್ಸುಕನಾಗಿದ್ದೇನೆ: ಸೂರ್ಯವಂಶಿ

ಪಿಟಿಐ
Published 12 ಡಿಸೆಂಬರ್ 2024, 10:12 IST
Last Updated 12 ಡಿಸೆಂಬರ್ 2024, 10:12 IST
<div class="paragraphs"><p>ವೈಭವ್ ಸೂರ್ಯವಂಶಿ</p></div>

ವೈಭವ್ ಸೂರ್ಯವಂಶಿ

   

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಇತಿಹಾಸದಲ್ಲೇ ಕೋಟ್ಯಧಿಪತಿಯಾದ ಅತಿ ಕಿರಿಯ ಆಟಗಾರ ಎನಿಸಿರುವ ವೈಭವ್ ಸೂರ್ಯವಂಶಿ, ಭಾರತದ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಆಡಲು ಕಾತರದಲ್ಲಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಈ ಯುವ ಎಡಗೈ ಆರಂಭಿಕ ಬ್ಯಾಟರ್, 'ನನಗೆ ಐಪಿಎಲ್‌ಗಿಂತ ಮಿಗಿಲಾಗಿ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಆಡಲು ಉತ್ಸುಕನಾಗಿದ್ದೇನೆ' ಎಂದು ತಿಳಿಸಿದ್ದಾರೆ.

ADVERTISEMENT

'ಐಪಿಎಲ್‌ಗಾಗಿ ಯಾವುದೇ ವಿಶೇಷ ಯೋಜನೆ ರೂಪಿಸಿಲ್ಲ. ಸಹಜ ರೀತಿಯಲ್ಲೇ ಆಡಲಿದ್ದೇನೆ. ಐಪಿಎಲ್‌ನಲ್ಲಿ ಆಡಲು ಅವಕಾಶ ಸಿಕ್ಕಿರುವುದಕ್ಕೆ ತುಂಬಾ ಸಂತಸಗೊಂಡಿದ್ದೇನೆ. ದ್ರಾವಿಡ್ ಸರ್ ಮಾರ್ಗದರ್ಶನದಲ್ಲಿ ಆಡಲು ಉತ್ಸುಕನಾಗಿದ್ದೇನೆ. ಐಪಿಎಲ್‌ಗಿಂತ ಹೆಚ್ಚಾಗಿ ದ್ರಾವಿಡ್ ಅಡಿಯಲ್ಲಿ ಆಡಲು ಖುಷಿಯಾಗುತ್ತಿದೆ' ಎಂದು ವೈಭವ್ ತಿಳಿಸಿದ್ದಾರೆ.

ಕಳೆದ ತಿಂಗಳು ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಬಿಹಾರ ಮೂಲದ 13 ವರ್ಷದ ವೈಭವ್ ಸೂರ್ಯವಂಶಿ ಅವರನ್ನು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ, ಬರೋಬ್ಬರಿ ₹1.10 ಕೋಟಿ ನೀಡಿ ಖರೀದಿಸಿತ್ತು.

ರಾಜಸ್ಥಾನ ರಾಯಲ್ಸ್ ತಂಡಕ್ಕೆ ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿದ್ದಾರೆ. ವೈಭಬ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ದ್ರಾವಿಡ್, 'ವೈಭವ್ ಓರ್ವ ಕ್ರಿಕೆಟಿಗನಾಗಿ ಬೆಳೆಯಲು ಪೂರಕವಾದ ವಾತಾವರಣ ಸೃಷ್ಟಿಸಲು ಫ್ರಾಂಚೈಸಿಗೆ ಸಾಧ್ಯವಾಗುತ್ತದೆ ಎಂದು ನಂಬಿದ್ದೇನೆ' ಎಂದು ಹೇಳಿದ್ದರು.

ಇತ್ತೀಚೆಗೆ ನಡೆದ ಅಂಡರ್-19 ಏಷ್ಯಾ ಕಪ್‌ನಲ್ಲಿ ವೈಭವ್ ಭಾರತದ ತಂಡದ ಭಾಗವಾಗಿದ್ದರು. ಆದರೆ ಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಪರಾಭವಗೊಂಡಿತ್ತು. 'ಟೂರ್ನಿಯಲ್ಲಿ ನಮ್ಮ ತಂಡ ಉತ್ತಮ ಪ್ರದರ್ಶನ ನೀಡಿಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ. ಕೆಲವೊಮ್ಮೆ ಹೀಗಾಗುತ್ತದೆ. ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.