ನವದೆಹಲಿ: ವಿರಾಟ್ ಕೊಹ್ಲಿ ಅವರ ಟೆಸ್ಟ್ ನಿವೃತ್ತಿ ವಿಷಯವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಬೇಕಿತ್ತು. ಅವರು ಗೌರವಪೂರ್ವಕ ವಿದಾಯಕ್ಕೆ ಅರ್ಹರಾಗಿದ್ದರು ಎಂದು ಭಾರತ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
‘ಕೊಹ್ಲಿ ಅವರು ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಏಕಾಏಕಿ ವಿದಾಯ ಹೇಳಿದ್ದು ನನಗೆ ನೋವುಂಟು ಮಾಡಿದೆ. ಅವರು ವಿದಾಯ ಘೋಷಿಸಿದ ರೀತಿಯೂ ಬೇಸರ ಮೂಡಿಸಿದೆ. ನಿವೃತ್ತಿಯ ವಿಚಾರವನ್ನು ಇನ್ನಷ್ಟು ಉತ್ತಮವಾಗಿ ನಿಭಾಯಿಸಬೇಕಿತ್ತು’ ಎಂದು ಸೋನಿಲಿವ್‌ಗೆ ನೀಡಿದ ಸಂದರ್ಶನದಲ್ಲಿ ರವಿಶಾಸ್ತ್ರಿ ಹೇಳಿದ್ದಾರೆ.
‘ನನಗೆ ಅವಕಾಶವಿದ್ದರೆ, ಕೊಹ್ಲಿ ಅವರನ್ನು ಆಸ್ಟ್ರೇಲಿಯಾ ಪ್ರವಾಸದ ನಂತರ ತಂಡದ ನಾಯಕನನ್ನಾಗಿ ಮಾಡುತ್ತಿದ್ದೆ’ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.