ADVERTISEMENT

ಭಾರತೀಯ ಕ್ರಿಕೆಟಿಗರ ಸಂಘ: ಮರಣ ಹೊಂದಿದ ಸದಸ್ಯರ ಕುಟುಂಬಕ್ಕೆ ₹1 ಲಕ್ಷ ನೆರವು

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2025, 15:52 IST
Last Updated 25 ಆಗಸ್ಟ್ 2025, 15:52 IST
   

ಬೆಂಗಳೂರು: ಭಾರತೀಯ ಕ್ರಿಕೆಟಿಗರ ಸಂಘದ (ಐಸಿಎ) ಸದಸ್ಯರಿಗೆ ಮರಣ ಪರಿಹಾರ ನಿಧಿ ನೀಡುವ ಯೋಜನೆ ಆರಂಭಿಸಲಿದೆ.  ಮರಣ ಹೊಂದಿದ ಸದಸ್ಯರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ನೀಡುವ ಯೋಜನೆ ಇದಾಗಿದೆ.  

ಮೃತಪಟ್ಟ ಸದಸ್ಯರ ಪತ್ನಿ ಅಥವಾ ಪತಿಗೆ ಬಿಸಿಸಿಐ ಅನುಮೋದನೆಯ ಬಳಿಕ  ₹1 ಲಕ್ಷ ಪರಿಹಾರ (ಒಂದು ಸಲದ ನೆರವು) ನೀಡಲಾಗುತ್ತದೆ. ಟೆಸ್ಟ್‌ ಕ್ರಿಕೆಟ್‌ ಆಟಗಾರರನ್ನು ಹೊರತುಪಡಿಸಿ ಉಳಿದ ಸದಸ್ಯರಿಗೆ ಮಾತ್ರ ಈ ಯೋಜನೆ ಅನ್ವಯಿಸುತ್ತದೆ ಎಂದು ಐಸಿಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆರಂಭಿಕ ಹಂತದಲ್ಲಿ 50 ಮಂದಿಗೆ ಈ ಯೋಜನೆಯ ಲಾಭ ಸಿಗಲಿದೆ ಎಂದೂ ತಿಳಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.