ADVERTISEMENT

ಐಸಿಸಿ ಸಭೆ ಇಂದು: ಮುಂದಿನ ವರ್ಷ ಟಿ20 ವಿಶ್ವಕಪ್ ಕುರಿತು ಚರ್ಚೆ

ಪಿಟಿಐ
Published 6 ಆಗಸ್ಟ್ 2020, 19:30 IST
Last Updated 6 ಆಗಸ್ಟ್ 2020, 19:30 IST
ಸೌರವ್ ಗಂಗೂಲಿ ಮತ್ತು ಜಯ್ ಶಾ
ಸೌರವ್ ಗಂಗೂಲಿ ಮತ್ತು ಜಯ್ ಶಾ   

ನವದೆಹಲಿ : ಮುಂದಿನ ವರ್ಷ ಎರಡು ಟಿ20 ವಿಶ್ವಕಪ್ ಟೂರ್ನಿಗಳನ್ನು ಆಯೋಜಿಸುವ ಕುರಿತು ಶುಕ್ರವಾರ ನಡೆಯಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಈ ಆನ್‌ಲೈನ್ ಸಭೆಯಲ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಕ್ರಿಕೆಟ್ ಆಸ್ಟ್ರೇಲಿಯಾದ ಉನ್ನತ ಸ್ಥಾನದಲ್ಲಿರುವ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ, ಕ್ರಿಕೆಟ್ ಆಸ್ಟ್ರೇಲಿಯಾದ ಅಧ್ಯಕ್ಷ ಅರ್ಲ್ ಎಡಿಂಗ್ಸ್‌ ಮತ್ತು ಸಿಎಒ ನಿಕ್ ಹಾಕ್ಲೆ ಭಾಗವಹಿಸುವ ನಿರೀಕ್ಷೆ ಇದೆ.

ADVERTISEMENT

’ಮುಂದಿನ ವರ್ಷ ನ್ಯೂಜಿಲೆಂಡ್‌ನಲ್ಲಿ ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿ ಆಯೋಜಿಸುವ ಕುರಿತ ಚರ್ಚೆ ನಡೆಯಲಿದೆ. ಇದಲ್ಲದೇ ಇನ್ನೂ ಕೆಲವು ಮಹತ್ವದ ವಿಚಾರಗಳ ಕುರಿತು ನಿರ್ಧಾರ ಕೈಗೊಳ್ಳಬಹುದು‘ ಎಂದು ಮೂಲಗಳು ತಿಳಿಸಿವೆ.

ಇದೇ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್‌ ಹತೋಟಿಗೆ ಬರದ ಕಾರಣ ಆಸ್ಟ್ರೇಲಿಯಾವು ಟೂರ್ನಿಯನ್ನು ಮುಂದೂಡಿದೆ. ಈ ವಿಶ್ವಕಪ್ ಟೂರ್ನಿಯನ್ನು ಪ್ರತಿವರ್ಷ ನಡೆಸಲು ಈ ಹಿಂದೆ ನಿರ್ಧರಿಸಲಾಗಿತ್ತು. ಮುಂದಿನ ವರ್ಷದ ಅಕ್ಟೋಬರ್‌ನಲ್ಲಿ ಭಾರತವು ಟೂರ್ನಿಗೆ ಆತಿಥ್ಯವಹಿಸುವುದು. ಆದ್ದರಿಂದ ಅದಕ್ಕೂ ಮುನ್ನವೇ ಆಸ್ಟ್ರೇಲಿಯಾ ಟಿ20 ವಿಶ್ವಕಪ್ ನಡೆಸಲು ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕಿದೆ. ಒಂದು ವೇಳೆ ಭಾರತವು 2022ಕ್ಕೆ ತನ್ನ ಟೂರ್ನಿಯನ್ನು ಮುಂದೂಡುವ ಸಾಧ್ಯತೆಗಳ ಕುರಿತು ಚರ್ಚೆ ನಡೆಯಬಹುದು. 2023ರಲ್ಲಿ ಭಾರತವು ಏಕದಿನ ವಿಶ್ವಕಪ್ ಟೂರ್ನಿಯನ್ನೂ ಆಯೋಜಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.