ADVERTISEMENT

ICC World Cup 2023: ಆಸ್ಟ್ರೇಲಿಯಾ ಎದುರು ಪಾಕಿಸ್ತಾನಕ್ಕೆ ಸೋಲು

ಆಸ್ಟ್ರೇಲಿಯಾಕ್ಕೆ 62 ರನ್‌ಗಳಿಂದ ಜಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಅಕ್ಟೋಬರ್ 2023, 16:59 IST
Last Updated 20 ಅಕ್ಟೋಬರ್ 2023, 16:59 IST
<div class="paragraphs"><p>ಆಸ್ಟ್ರೇಲಿಯಾ ಆಟಗಾರರ ಸಂಭ್ರಮ</p></div>

ಆಸ್ಟ್ರೇಲಿಯಾ ಆಟಗಾರರ ಸಂಭ್ರಮ

   

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಪಾಕಿಸ್ತಾನದ ವಿರುದ್ಧ 62 ರನ್‌ಗಳಿಂದ ಭರ್ಜರಿ ಜಯ ಗಳಿಸಿತು.

ಆಸ್ಟ್ರೇಲಿಯಾ ನೀಡಿದ್ದ 367 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ್ದ ಪಾಕಿಸ್ತಾನ 45.3 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಸೋಲಿಗೆ ಶರಣಾಯಿತು. ಕೊನೆಗೆ 305 ರನ್ ಗಳಿಸಲಷ್ಟೇ ಶಕ್ತವಾಯಿತು.

ADVERTISEMENT

ಪಾಕಿಸ್ತಾನದ ಪರ ಇಮಾಮ್ ಉಲ್ ಹಕ್ 71 ರನ್, ಅಬ್ದುಲ್ಲಾ 64, ಮೊಹಮ್ಮದ್ ರಿಜ್ವಾನ್ 46 ರನ್ ಬಾರಿಸಿದರು.

ಆಸ್ಟ್ರೇಲಿಯಾ ಪರ ಅಮೋಘ ಶತಕ ಸಿಡಿಸಿದ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಚ್ ಆಸೀಸ್ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು.

ಟಾಸ್ ಗೆದ್ದು ಬ್ಯಾಟಿಂಗ್ ಆಹ್ವಾನ ಪಡೆದ ಆಸ್ಟ್ರೇಲಿಯಾ ತಂಡದ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಜೀವನ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ವಾರ್ನರ್ 9 ಸಿಕ್ಸರ್ ಮತ್ತು 14 ಬೌಂಡರಿ ಸಹಿತ 124 ಎಸೆತಗಳಲ್ಲಿ 163 ರನ್ ಸಿಡಿಸಿದರೆ, ಮಿಚೆಲ್ ಮಾರ್ಷ್ 9 ಸಿಕ್ಸರ್, 10 ಬೌಂಡರಿ ಸಹಿತ 108 ಎಸೆತಗಳಲ್ಲಿ 121 ರನ್ ಸಿಡಿಸಿ ಸಂಭ್ರಮಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 259 ರನ್ ಸೇರಿಸಿತು.

ಬಳಿಕ, ಬಂದ ಬ್ಯಾಟರ್‌ಗಳು ವಿಫಲರಾದರು. ಮೊದಲೆರಡು ವಿಕೆಟ್ ಬೀಳುತ್ತಿದ್ದಂತೆ ಹಿಡಿತ ಸಾಧಿಸಿದ ಪಾಕಿಸ್ತಾನದ ಬೌಲರ್‌ಗಳು ಆಸ್ಟ್ರೇಲಿಯಾ 400 ರನ್ ಸಮೀಪ ತಲುಪದಂತೆ ನೋಡಿಕೊಂಡರು. ಅಂತಿಮವಾಗಿ ಆಸ್ಟ್ರೇಲಿಯಾ ತಂಡ 50 ಓವರ್‌ಗಳ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 367 ರನ್ ಪೇರಿಸಿತು.

ಪಾಕಿಸ್ತಾನ ಪರ ಶಾಹಿನ್ ಅಫ್ರಿದಿ 5, ಹ್ಯಾರಿಸ್ ರೌಫ್ 3 ವಿಕೆಟ್ ಕಬಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.