
ರೋಹಿತ್ ಶರ್ಮಾ ದಾಖಲೆ
ಪಿಟಿಐ ಚಿತ್ರ
ದುಬೈ: ಭಾರತ ತಂಡದ ನಿಕಟಪೂರ್ವ ನಾಯಕ ರೋಹಿತ್ ಶರ್ಮಾ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ಇದೇ ಮೊದಲ ಬಾರಿ ಅಗ್ರಸ್ಥಾನಕ್ಕೇರಿದ್ದಾರೆ.
38 ವರ್ಷದ ಮುಂಬೈಕರ್ ರೋಹಿತ್ ಅವರು ಎರಡು ಸ್ಥಾನ ಬಡ್ತಿ ಪಡೆದಿದ್ದಾರೆ. ಅವರ ವೃತ್ತಿಜೀವನದಲ್ಲಿ ಅಗ್ರಸ್ಥಾನಕ್ಕೇರಿದ್ದು ಇದೇ ಮೊದಲು. ಇದೊಂದು ಐತಿಹಾಸಿಕ ಸಾಧನೆಯಾಗಿದೆ.
ಈಚೆಗೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಅಜೇಯ 121 ರನ್ ಗಳಿಸಿದ್ದರು. ಗೆಲುವಿನ ರೂವಾರಿಯಾಗಿದ್ದರು. ಸರಣಿಶ್ರೇಷ್ಠ ಗೌರವ ಕೂಡ ಗಳಿಸಿದ್ದರು. ರೋಹಿತ್ ಅವರು ಒಟ್ಟು 781 ರೇಟಿಂಗ್ ಪಾಯಿಂಟ್ಸ್ ಗಳಿಸಿದ್ದಾರೆ. ರೋಹಿತ್ 2007ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಇತ್ತೀಚೆಗೆ ಅವರು ಟೆಸ್ಟ್ ಮತ್ತು ಟಿ20 ಮಾದರಿಗಳಿಗೆ ನಿವೃತ್ತಿ ಘೋಷಿಸಿದ್ದರು. ಏಕದಿನ ಕ್ರಿಕೆಟ್ ಮಾದರಿಯಲ್ಲಿ ಮಾತ್ರ ಮುಂದುವರಿದಿದ್ದಾರೆ.
ಈ ಸಾಧನೆಯಿಂದಾಗಿ ಅವರು ಐಸಿಸಿ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದ ಅಫ್ಗಾನಿಸ್ತಾನದ ಇಬ್ರಾಹಿಂ ಝದ್ರಾನ್ ಅವರನ್ನು ಹಿಂದಿಕ್ಕಿದರು. ಭಾರತದ ಶುಭಮನ್ ಗಿಲ್ ಅವರು ಮೂರನೇ ಸ್ಥಾನ ಪಡೆದರು.
ಹೊಸದಾಗಿ ಪ್ರಕಟಗೊಂಡ ಐಸಿಸಿ ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್ ಪಟ್ಟಿ
ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅವರು ಕ್ರಮವಾಗಿ 6 ಮತ್ತು 9ನೇ ಸ್ಥಾನದಲ್ಲಿದ್ದಾರೆ.
ಆಲ್‌ರೌಂಡರ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಅವರು 12ನೇ ಸ್ಥಾನದಿಂದ 8ಕ್ಕೇರಿದ್ದಾರೆ. ಬೌಲಿಂಗ್ ವಿಭಾಗದಲ್ಲಿಯೂ ಅಕ್ಷರ್ ಅವರು ಆರು ಹಂತಗಳ ಬಡ್ತಿಯೊಂದಿಗೆ 31ನೇ ಸ್ಥಾನಕ್ಕೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.