
ದುಬೈ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ಬಿಡುಗಡೆಯಾದ ಐಸಿಸಿ ಏಕದಿನ ರ‍್ಯಾಂಕಿಂಗ್‌ನ ಬ್ಯಾಟರ್‌ಗಳ ಪಟ್ಟಿಯಲ್ಲಿ 785 ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಭರ್ಜರಿ ಅರ್ಧಶತಕ ಬಾರಿಸಿದ ನಂತರ ರ‍್ಯಾಂಕಿಂಗ್‌ನಲ್ಲಿ ಬದಲಾವಣೆಯಾಗಿದೆ.
ಏಕದಿನ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ವಿರಾಟ್, ಎರಡು ಶತಕ ಸಹಿತ ಸತತ 5 ಬಾರಿ 50ಕ್ಕಿಂತ ಅಧಿಕ ರನ್ ಗಳಿಸಿದ್ದಾರೆ.
37 ವರ್ಷದ ವಿರಾಟ್ ಕೊಹ್ಲಿ, ಕೊನೆಯ ಬಾರಿಗೆ 2021ರಲ್ಲಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದರು. 2013, 2017, 2019ರಲ್ಲಿ ಕೂಡ ಟಾಪ್ ಬ್ಯಾಟರ್ ಆಗಿದ್ದರು.
ಮಾಜಿ ನಾಯಕ ರೋಹಿತ್ ಶರ್ಮಾ ಅವರು 775 ಪಾಯಿಂಟ್ ಹೊಂದಿದ್ದು, ಮೂರನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಏಕದಿನ ತಂಡದ ನಾಯಕ ಶುಭಮನ್ ಗಿಲ್ 5ನೇ ಸ್ಥಾನ ಹಾಗೂ ಶ್ರೇಯಸ್ ಐಯ್ಯರ್ 10ನೇ ಸ್ಥಾನದಲ್ಲಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್. ರಾಹುಲ್ 11ನೇ ಸ್ಥಾನಕ್ಕೇರಿದ್ದಾರೆ.
ಏಕದಿನ ರ‍್ಯಾಂಕಿಂಗ್‌ನ ಬ್ಯಾಟರ್‌ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್‌ನ ಡೇರಿಯಲ್ ಮಿಚೆಲ್ 784 ಪಾಯಿಂಟ್‌ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ.
ಬೌಲರ್‌ಗಳ ಪಟ್ಟಿಯಲ್ಲಿ ಸ್ಪಿನ್ನರ್ ರಶೀದ್ ಖಾನ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಭಾರತದ ಕುಲದೀಪ್ ಯಾದವ್ 3ನೇ ಸ್ಥಾನ, ಮೊಹಮ್ಮದ್ ಸಿರಾಜ್ 15ನೇ ಸ್ಥಾನದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.