ADVERTISEMENT

ಮಹಿಳೆಯರ ಟಿ20 ವಿಶ್ವಕಪ್ ಮುಂದಕ್ಕೆ

ಪಿಟಿಐ
Published 20 ನವೆಂಬರ್ 2020, 3:14 IST
Last Updated 20 ನವೆಂಬರ್ 2020, 3:14 IST
ಕ್ರಿಕೆಟ್
ಕ್ರಿಕೆಟ್   

ದುಬೈ: ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯನ್ನು 2022ರಿಂದ 2023ಕ್ಕೆ ಮುಂದೂಡಲು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಗುರುವಾರ ನಿರ್ಧರಿಸಿದೆ. ದಕ್ಷಿಣ ಆಫ್ರಿಕಾದಲ್ಲಿ 2022ರ ನವೆಂಬರ್‌ನಲ್ಲಿ ಟೂರ್ನಿ ಆಯೋಜಿಸಲು ನಿರ್ಧರಿಸಲಾಗಿತ್ತು. ಹೊಸ ವೇಳಾಪಟ್ಟಿ ಪ್ರಕಾರ 2023ರ ಫೆಬ್ರುವರಿಯಲ್ಲಿ ನಡೆಯಲಿದೆ.

ಮುಂದಿನ ವರ್ಷ ನ್ಯೂಜಿಲೆಂಡ್‌ನಲ್ಲಿ ನಡೆಸಲು ಉದ್ದೇಶಿಸಿದ್ದ 50 ಓವರ್‌ಗಳ ವಿಶ್ವಕಪ್ ಟೂರ್ನಿಯನ್ನು 2022ಕ್ಕೆ ಮುಂದೂಡಲು ಕಳೆದ ಆಗಸ್ಟ್ ತಿಂಗಳಲ್ಲಿ ಐಸಿಸಿ ನಿರ್ಧರಿಸಿತ್ತು. 2022ರಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳೆಯರ ಕ್ರಿಕೆಟ್ ಸೇರಿಸಲು ಆಯೋಜಕರು ನಿರ್ಧರಿಸಿರುವುದರಿಂದ ಒಂದೇ ವರ್ಷ ಸತತ ಪಂದ್ಯಗಳನ್ನು ಆಡಿದಂತೆ ಆಗುತ್ತದೆ ಎಂಬ ಕಾರಣಕ್ಕೆ ಚುಟುಕು ವಿಶ್ವಕಪ್‌ ಟೂರ್ನಿಯನ್ನು ಮುಂದೂಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.