
ಪ್ರಜಾವಾಣಿ ವಾರ್ತೆ
ದುಬೈ: ಟಿ20 ವಿಶ್ವಕಪ್ ಮುಗಿಸಿ ತಮ್ಮ ದೇಶಗಳಿಗೆ ಮರಳಲಿರುವ ಆಟಗಾರರು ಮತ್ತು ಅಧಿಕಾರಿಗಳಿಗೆ ಪರ್ಯಾಯ ಮಾರ್ಗದ ಮೂಲಕ ಪ್ರಯಾಣ ವ್ಯವಸ್ಥೆ ಮಾಡಲು ಐಸಿಸಿ ಪರಿಶೀಲನೆ ನಡೆಸುತ್ತಿದೆ.
ಇರಾನ್ ಮೇಲೆ ಅಮೆರಿಕದ ದಾಳಿ ನಡೆಸಿ, ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಕಾರಣ ಆ ಮಾರ್ಗವಾಗಿ ಹೊರಡುವ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಅಮೆರಿಕ ಮತ್ತು ಇಸ್ರೇಲ್, ಶನಿವಾರ ಇರಾನ್‌ನ ಪ್ರಮುಖ ನೆಲೆಗಳ ಮೇಲೆ ದಾಳಿ ನಡೆಸಿತ್ತು.
‘ಮಧ್ಯಪ್ರಾಚ್ಯದಲ್ಲಿ ತಲೆದೋರಿರುವ ಪರಿಸ್ಥಿತಿಯನ್ನು ಐಸಿಸಿ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್‌ನ ಎಲ್ಲ ಭಾಗೀದಾರರ ಸುರಕ್ಷಿತ ಪ್ರಯಾಣ ವ್ಯವಸ್ಥೆಗೆ ತುರ್ತು ಕ್ರಮಗಳನ್ನು ಕೈಗೊಳ್ಳಲಿದೆ’ ಎಂದು ಐಸಿಸಿ ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.