ADVERTISEMENT

ICC Ranking: ವೈಫಲ್ಯದ ನಡುವೆಯೂ ODIನಲ್ಲಿ ನಂ.1 ಸ್ಥಾನದಲ್ಲಿ ಮುಂದುವರಿದ ಮಂದಾನ

ಪಿಟಿಐ
Published 7 ಅಕ್ಟೋಬರ್ 2025, 11:09 IST
Last Updated 7 ಅಕ್ಟೋಬರ್ 2025, 11:09 IST
<div class="paragraphs"><p>ಸ್ಮೃತಿ ಮಂದಾನ </p></div>

ಸ್ಮೃತಿ ಮಂದಾನ

   

ಪಿಟಿಐ

ದುಬೈ: ಐಸಿಸಿ ಮಹಿಳಾ ವಿಶ್ವಕಪ್‌ನ ಮೊದಲ ಎರಡು ಪಂದ್ಯಗಳಲ್ಲಿ ಕಳೆಪೆ ಪ್ರದರ್ಶನ ತೋರಿದ್ದರ ಹೊರತಾಗಿಯೂ ಭಾರತ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ADVERTISEMENT

ಮಂದಾನ ಅವರು ಸದ್ಯ 791 ರೇಟಿಂಗ್‌ನೊಂದಿಗೆ ಇಂಗ್ಲೆಂಡ್‌ ಆಟಗಾರ್ತಿ ನ್ಯಾಟ್ ಸಿವರ್-ಬ್ರಂಟ್‌ಗಿಂತ 60 ಪಾಯಿಂಟ್‌ಗಳ ಮುಂದಿದ್ದಾರೆ. ವಿಶ್ವಕಪ್‌ಗೆ ಕೆಲವು ದಿನಗಳ ಮೊದಲು ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸತತ ಶತಕಗಳನ್ನು ಸಿಡಿಸಿದ್ದರು. ಅದರೆ, ಪ್ರಸ್ತುತ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ 8 ಮತ್ತು ಪಾಕಿಸ್ತಾನ ವಿರುದ್ಧ 23 ರನ್ ಗಳಿಸಿ ನಿರಾಸೆ ಮೂಡಿಸಿದ್ದಾರೆ.

ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯಾದ ಬೆತ್ ಮೂನಿ 713 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ವಿಶ್ವಕಪ್‌ನಲ್ಲಿ ಶತಕ ಗಳಿಸಿದ ನಂತರ ದಕ್ಷಿಣ ಆಫ್ರಿಕಾದ ಟಾಜ್ಮಿನ್ ಬ್ರಿಟ್ಸ್ (706) ಮತ್ತು ಆಸ್ಟ್ರೇಲಿಯಾದ ಆಶ್ಲೀ ಗಾರ್ಡ್ನರ್ (697) ಗಣನೀಯ ಪ್ರಗತಿ ಸಾಧಿಸಿ ಕ್ರಮವಾಗಿ 4 ಮತ್ತು 5ನೇ ಸ್ಥಾನಗಳಿಗೆ ಏರಿದ್ದಾರೆ.

ಬೌಲಿಂಗ್‌ ವಿಭಾಗದಲ್ಲಿ ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್ 792 ರೇಟಿಂಗ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಸ್ಪಿನ್ನರ್ ದೀಪ್ತಿ ಶರ್ಮಾ (640) ಒಂದು ಸ್ಥಾನ ಕುಸಿತ ಕಂಡಿದ್ದು ಅಗ್ರ 10 ರಲ್ಲಿ ಸ್ಥಾನ ಪಡೆದಿರುವ ಏಕೈಕ ಭಾರತೀಯ ಬೌಲರ್ ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.