ADVERTISEMENT

ಏಕದಿನ ರ‍್ಯಾಂಕಿಂಗ್: ಅಗ್ರಸ್ಥಾನದಲ್ಲಿ ಕೊಹ್ಲಿ, ವೇಗಿ ಭುವನೇಶ್ವರ್‌ಗೆ ಬಡ್ತಿ

ಪಿಟಿಐ
Published 31 ಮಾರ್ಚ್ 2021, 12:49 IST
Last Updated 31 ಮಾರ್ಚ್ 2021, 12:49 IST
ವಿರಾಟ್ ಕೊಹ್ಲಿ–ರಾಯಿಟರ್ಸ್ ಚಿತ್ರ
ವಿರಾಟ್ ಕೊಹ್ಲಿ–ರಾಯಿಟರ್ಸ್ ಚಿತ್ರ   

ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಏಕದಿನ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಐಸಿಸಿ ಬುಧವಾರ ಕ್ರಮಾಂಕಗಳನ್ನು ಪ್ರಕಟಿಸಿದ್ದು, ಜಸ್‌ಪ್ರೀತ್ ಬೂಮ್ರಾ ಬೌಲರ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಾರಿದ್ದಾರೆ.

ಇಂಗ್ಲೆಂಡ್ ಎದುರಿನ ಮೊದಲ ಹಾಗೂ ಎರಡನೇ ಏಕದಿನ ಪಂದ್ಯಗಳಲ್ಲಿ ಕ್ರಮವಾಗಿ 56 ಹಾಗೂ 66 ರನ್ ಕಲೆಹಾಕಿದ ಕೊಹ್ಲಿ ಬಳಿ ಸದ್ಯ 870 ರೇಟಿಂಗ್ ಪಾಯಿಂಟ್‌ಗಳಿವೆ. ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೆ ವಿಶ್ರಾಂತಿ ಪಡೆದಿದ್ದ ಬೂಮ್ರಾ, ಒಂದು ಕ್ರಮಾಂಕ ಕುಸಿತ ಕಂಡಿದ್ದು ಸದ್ಯ 690 ಪಾಯಿಂಟ್ಸ್ ಹೊಂದಿದ್ದಾರೆ.

ಭಾರತದ ಸೀಮಿತ ಓವರ್‌ಗಳ ಪಂದ್ಯಗಳ ಮಾದರಿಯಲ್ಲಿ ಉಪನಾಯಕರಾಗಿರುವ ರೋಹಿತ್ ಶರ್ಮಾ, ಬ್ಯಾಟ್ಸ್‌ಮನ್‌ಗಳ ವಿಭಾಗದಲ್ಲಿ ಮೂರನೇ ಕ್ರಮಾಂಕದಲ್ಲಿದ್ದು, ಪಾಕಿಸ್ತಾನದ ಬಾಬರ್ ಆಜಂ ಎರಡನೇ ಸ್ಥಾನದಲ್ಲಿದ್ದಾರೆ. ಕೆ.ಎಲ್‌.ರಾಹುಲ್‌ 27ನೇ ಸ್ಥಾನಕ್ಕೇರಿದ್ದಾರೆ.

ADVERTISEMENT

ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಜೀವನಶ್ರೇಷ್ಠ 42ನೇ ಕ್ರಮಾಂಕಕ್ಕೆ ತಲುಪಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ 42ಕ್ಕೆ ಮೂರು ವಿಕೆಟ್ ಗಳಿಸಿದ್ದ ವೇಗಿ ಭುವನೇಶ್ವರ ಕುಮಾರ್‌ ಒಂಬತ್ತು ಸ್ಥಾನಗಳ ಬಡ್ತಿ ಪಡೆದಿದ್ದು, 11ನೇ ಕ್ರಮಾಂಕದಲ್ಲಿದ್ದಾರೆ. 93ನೇ ಕ್ರಮಾಂಕದಲ್ಲಿದ್ದ ಶಾರ್ದೂಲ್ ಠಾಕೂರ್‌ 80ನೇ ಸ್ಥಾನಕ್ಕೇರಿದ್ದಾರೆ.

ಟಿ20 ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ರಾಹುಲ್ ಹಾಗೂ ಕೊಹ್ಲಿ ಇಬ್ಬರೂ ಒಂದು ಸ್ಥಾನ ಇಳಿಕೆ ಕಂಡಿದ್ದು, ಕ್ರಮವಾಗಿ ಐದು ಮತ್ತು ಆರನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‌ ಎರಡನೇ ಸ್ಥಾನಕ್ಕೆ ಮರಳಿದ್ದಾರೆ. ಆಲ್‌ರೌಂಡರ್‌ಗಳ ವಿಭಾಗದಲ್ಲಿ ರವೀಂದ್ರ ಜಡೇಜಾ ಮೂರು ಹಾಗೂ ಅಶ್ವಿನ್ ನಾಲ್ಕನೇ ಕ್ರಮಾಂಕ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.