ADVERTISEMENT

ಟಿ20 ವಿಶ್ವಕಪ್‌ಗೆ ಐಸಿಸಿ ಪರ್ಯಾಯ ಯೋಜನೆ

ಪಿಟಿಐ
Published 7 ಏಪ್ರಿಲ್ 2021, 13:10 IST
Last Updated 7 ಏಪ್ರಿಲ್ 2021, 13:10 IST
ಐಸಿಸಿ
ಐಸಿಸಿ   

ನವೆಹಲಿ: ಕೋವಿಡ್–19 ನಿಯಂತ್ರಣಕ್ಕೆ ಬಾರದೇ ಇದ್ದರೆ ಟಿ20 ವಿಶ್ವಕಪ್ ಟೂರ್ನಿಯನ್ನು ಎಲ್ಲಿ ಮತ್ತು ಹೇಗೆ ಆಯೋಜಿಸಬೇಕು ಎಂಬುದಕ್ಕೆ ಸಂಬಂಧಿಸಿ ಆಲೋಚನೆ ನಡೆದಿದ್ದು ‘ಬಿ’ ‍ಪ್ಲ್ಯಾನ್ ಸಿದ್ಧಪಡಿಸಲಾಗಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ (ಐಸಿಸಿ) ಹಂಗಾಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೆಫ್‌ ಅಲಾರ್ಡಿಸ್ ಬುಧವಾರ ತಿಳಿಸಿದ್ದಾರೆ.

ಟೂರ್ನಿಯನ್ನು ಇದೇ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ದೇಶದಲ್ಲಿ ಈಚೆಗೆ ಪ್ರತಿದಿನ ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ನಡುವೆ ಇದೇ ಒಂಬತ್ತರಿಂದ ಐಪಿಎಲ್ ಟೂರ್ನಿ ನಡೆಯಲಿದೆ.

‘ಟೂರ್ನಿಯನ್ನು ನಿಗದಿಪಡಿಸಿದಂತೆ ಆಯೋಜಿಸಲು ನಿರ್ಧರಿಸಲಾಗಿದೆ. ಪ್ಲ್ಯಾನ್ ‘ಬಿ’ ಸಿದ್ಧವಿದ್ದರೂ ಅದನ್ನು ಜಾರಿಗೆ ತರಲು ಈ ವರೆಗೆ ಐಸಿಸಿ ಮುಂದಾಗಲಿಲ್ಲ. ಬಿಸಿಸಿಐ ಜೊತೆ ಸತತ ಸಂಪರ್ಕದಲ್ಲಿದ್ದು ಅಗತ್ಯವಿದ್ದರೆ ಪರ್ಯಾಯ ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು’ ಎಂದು ಅವರು ವರ್ಚುವಲ್ ಸಂವಾದದಲ್ಲಿ ಹೇಳಿದರು.

ADVERTISEMENT

‘ಪ್ರಪಂಚದ ವಿವಿಧ ದೇಶಗಳಲ್ಲಿ ಕ್ರಿಕೆಟ್ ಆಡಲಾಗುತ್ತದೆ. ಬದಲಾಗುತ್ತಿರುವ ಜಗತ್ತಿನಲ್ಲಿ ಕೆಲವು ದೇಶಗಳು ಅತ್ಯುತ್ತಮ ಸುರಕ್ಷಾ ಮಾರ್ಗಗಳನ್ನು ಅನುಸರಿಸುತ್ತಿವೆ. ಕಳೆದ ಬಾರಿಯ ಐಪಿಎಲ್ ಟೂರ್ನಿಯನ್ನು ಯಶಸ್ವಿಯಾಗಿ ಸಂಘಟಿಸಿರುವ ಯುಎಇಯಲ್ಲಿ ಟಿ20 ವಿಶ್ವಕಪ್ ಟೂರ್ನಿಯನ್ನು ಆಯೋಜಿಸಬಹುದಾಗಿದೆ’ ಎಂದು ಅವರು ಹೇಳಿದರು.

ಕೋವಿಡ್‌ನಿಂದಾಗಿ ಮಹಿಳಾ ಕ್ರಿಕೆಟ್‌ ಮೇಲೆ ದುಷ್ಪರಿಣಾಮ ಬೀರಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.