
ಬಾಂಗ್ಲಾದೇಶ ಕ್ರಿಕೆಟ್ ತಂಡದ ಆಟಗಾರರು
ಐಸಿಸಿ ಟಿ20 ವಿಶ್ವಕಪ್ 2026ಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಬಾಂಗ್ಲಾದೇಶ ತಾವು ಆಡುವ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಮನವಿ ಮಾಡಿದೆ. ಈಗಾಗಲೇ ಬಾಂಗ್ಲಾದೇಶದ ಪಂದ್ಯಗಳು ಕೊಲ್ಕತ್ತ ಹಾಗೂ ಮುಂಬೈನಲ್ಲಿ ನಿಗದಿಯಾಗಿವೆ. ಆದರೆ, ಭದ್ರತಾ ದೃಷ್ಟಿಯಿಂದ ಭಾರತದಲ್ಲಿ ಆಡುವುದಿಲ್ಲ ಎಂದು ಬಾಂಗ್ಲಾ ಕ್ರಿಕೆಟ್ ಬೋರ್ಡ್ (ಬಿಸಿಬಿ) ತಿಳಿಸಿದೆ.
ಬಾಂಗ್ಲಾ ಕ್ರಿಕೆಟ್ ಬೋರ್ಡ್, ಭದ್ರತಾ ದೃಷ್ಟಿಯಿಂದ ಇಂದು ಅಥವಾ ನಾಳೆ (ಸೋಮವಾರ, ಮಂಗಳವಾರ) ಒಳಗಾಗಿ ತಮ್ಮ ತಂಡ ಆಡುವ ಪಂದ್ಯಗಳನ್ನು ಬೇರೆ ಮೈದಾನಗಳಿಗೆ ಸ್ಥಳಾಂತರಿಸುವಂತೆ ಐಸಿಸಿಗೆ ಮನವಿ ಮಾಡಿದೆ.
ಬಾಂಗ್ಲಾದೇಶದ ಮನವಿಗೆ ಐಸಿಸಿ ಪ್ರತಿಕ್ರಿಯಿಸಿದ್ದು, ಕೊಲ್ಕತ್ತ ಹಾಗೂ ಮುಂಬೈನಲ್ಲಿ ಆಯೋಜನೆಗೊಂಡಿರುವ ಪಂದ್ಯಗಳನ್ನು ಚೆನ್ನೈ ಮತ್ತು ತಿರುವನಂತಪುರದಲ್ಲಿ ಆಡುವಂತೆ ಸೂಚನೆ ನೀಡಿದೆ ಎಂದು ವರದಿಯಾಗಿದೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿಗಳು ನಡೆದ ಬಳಿಕ ಬಿಸಿಸಿಐ ಸಲಹೆಯ ಮೇರೆಗೆ, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆಡಲು ₹9.20 ಕೋಟಿಗೆ ಆಯ್ಕೆಯಾಗಿದ್ದ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಕೈಬಿಡಲಾಯಿತು. ಇದಾದ ಬಳಿಕ, ಬಾಂಗ್ಲಾ ತಂಡ ಭಾರತದಲ್ಲಿ ಕ್ರಿಕೆಟ್ ಆಡದಿರಲು ನಿರ್ಧರಿಸಿದ್ದು, ತನ್ನ ಪಾಲಿನ ಪಂದ್ಯಗಳನ್ನು ಶ್ರೀಲಂಕಾಗೆ ವರ್ಗಾಯಿಸಲು ಐಸಿಸಿಗೆ ಮನವಿ ಸಲ್ಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.