ADVERTISEMENT

ICC T–20 Ranking: ಅಗ್ರಸ್ಥಾನ ಕಾಪಾಡಿಕೊಂಡ ಅಭಿಷೇಕ್, ಹಾರ್ದಿಕ್, ಚಕ್ರವರ್ತಿ

ಪಿಟಿಐ
Published 24 ಸೆಪ್ಟೆಂಬರ್ 2025, 10:49 IST
Last Updated 24 ಸೆಪ್ಟೆಂಬರ್ 2025, 10:49 IST
<div class="paragraphs"><p>ಅಭಿಷೇಕ್ ಶರ್ಮಾ, ವರುಣ್ ಚಕ್ರವರ್ತಿ</p></div>

ಅಭಿಷೇಕ್ ಶರ್ಮಾ, ವರುಣ್ ಚಕ್ರವರ್ತಿ

   

(ಪಿಟಿಐ ಚಿತ್ರ)

ದುಬೈ: ಬುಧವಾರ ಬಿಡುಗಡೆಯಾಗಿರುವ ನೂತನ ಐಸಿಸಿ ಟಿ–20 ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ, ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಹಾಗೂ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಅಗ್ರ ಸ್ಥಾನಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ಕಳೆದ ವಾರ ಐಸಿಸಿ ಟಿ–20 ಶ್ರೇಯಾಂಕದಲ್ಲಿ ಮೊದಲ ಬಾರಿಗೆ ನಂ.1 ಸ್ಥಾನಕ್ಕೇರಿದ್ದ ವರುಣ್ ಚಕ್ರವರ್ತಿ 14 ರೇಟಿಂಗ್ ಪಾಯಿಂಟ್‌ಗಳ ಏರಿಕೆಯೊಂದಿಗೆ 747 ಪಾಯಿಂಟ್‌ಗಳಿಗೆ ತಲುಪಿದ್ದು, ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ.

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿಯೂ ಏರಿಕೆ ಕಂಡಿದ್ದು, 6 ಸ್ಥಾನಗಳ ಏರಿಕೆಯೊಂದಿಗೆ 60ನೇ ಸ್ಥಾನಕ್ಕೆ ತಲುಪಿದ್ದಾರೆ.

ಬ್ಯಾಟರ್‌ಗಳ ಪಟ್ಟಿಯಲ್ಲಿ ಟೀಂ ಇಂಡಿಯಾದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ತಮ್ಮ ನಂ. 1 ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಗ್ರೂಪ್ ಹಂತದ ಪಂದ್ಯದಲ್ಲಿ ಒಮಾನ್ ವಿರುದ್ಧ 38 ರನ್ ಗಳಿಸಿದ್ದರು. ನಂತರ ಪಾಕಿಸ್ತಾನದ ವಿರುದ್ಧ ಸ್ಫೋಟಕ 74 ರನ್ ಗಳಿಸಿ ಗೆಲುವಿನ ರೂವಾರಿಯಾಗಿದ್ದರು. ಆ ಮೂಲಕ ತಮ್ಮ ರ‍್ಯಾಂಕ್ ಅನ್ನು ಇನ್ನಷ್ಟು ಭದ್ರಪಡಿಸಿಕೊಂಡಿದ್ದಾರೆ.

ಇವರ ಜೊತೆಗೆ ಪಾಕಿಸ್ತಾನ ವಿರುದ್ಧ ಸ್ಫೋಟಕ 30 ರನ್ ಸಿಡಿಸಿದ್ದ ತಿಲಕ್ ವರ್ಮಾ 3ನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ. ನಾಯಕ ಸೂರ್ಯಕುಮಾರ್ ಯಾದವ್ ಕೂಡ ಒಂದು ಸ್ಥಾನಕ ಏರಿಕೆ ಕಂಡು 5ನೇ ಸ್ಥಾನದ ಸಮೀಪಕ್ಕೆ ಬಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.