ADVERTISEMENT

ರ‍್ಯಾಂಕಿಂಗ್‌: ಐದನೇ ಸ್ಥಾನಕ್ಕೇರಿದ ರಾಹುಲ್‌

ಪಿಟಿಐ
Published 12 ಮಾರ್ಚ್ 2019, 14:23 IST
Last Updated 12 ಮಾರ್ಚ್ 2019, 14:23 IST
ಕೆ.ಎಲ್‌.ರಾಹುಲ್‌
ಕೆ.ಎಲ್‌.ರಾಹುಲ್‌   

ದುಬೈ: ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ ಕೆ.ಎಲ್‌.ರಾಹುಲ್‌, ಮಂಗಳವಾರ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಬಿಡುಗಡೆ ಮಾಡಿರುವ ಟ್ವೆಂಟಿ–20 ಬ್ಯಾಟ್ಸ್‌ಮನ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಏರಿದ್ದಾರೆ.

ಆಸ್ಟ್ರೇಲಿಯಾ ಎದುರಿನ ಟ್ವೆಂಟಿ–20 ಸರಣಿಯ ಎರಡು ಪಂದ್ಯಗಳಲ್ಲಿ ಕರ್ನಾಟಕದ ರಾಹುಲ್ ಕ್ರಮವಾಗಿ 47 ಮತ್ತು 50ರನ್‌ ದಾಖಲಿಸಿದ್ದರು. ಈ ಮೂಲಕ ಒಂದು ಸ್ಥಾನ ಬಡ್ತಿ ಹೊಂದಿದ್ದಾರೆ.

ರೋಹಿತ್‌ ಶರ್ಮಾ ಮತ್ತು ಶಿಖರ್‌ ಧವನ್‌, ಕ್ರಮವಾಗಿ 11 ಮತ್ತು 15ನೇ ಸ್ಥಾನಗಳಲ್ಲಿದ್ದಾರೆ. ವಿರಾಟ್‌ ಕೊಹ್ಲಿ 17ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಪಾಕಿಸ್ತಾನದ ಬಾಬರ್‌ ಅಜಂ ಅಗ್ರಪಟ್ಟ ಅಲಂಕರಿಸಿದ್ದಾರೆ.

ADVERTISEMENT

ಬೌಲರ್‌ಗಳ ಪಟ್ಟಿಯಲ್ಲಿ ಸ್ಪಿನ್ನರ್‌ ಕುಲದೀಪ್‌ ಯಾದವ್‌ ಐದನೇ ಸ್ಥಾನಕ್ಕೆ ಇಳಿದಿದ್ದಾರೆ. ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಕುಲದೀಪ್‌ ಆಡಿರಲಿಲ್ಲ. ಹೀಗಾಗಿ ಒಂದು ಸ್ಥಾನ ಕಳೆದುಕೊಂಡಿದ್ದಾರೆ.

ಜಸ್‌ಪ್ರೀತ್‌ ಬೂಮ್ರಾ ಮತ್ತು ಭುವನೇಶ್ವರ್‌ ಕುಮಾರ್‌ ಅವರು ಕ್ರಮವಾಗಿ 16 ಮತ್ತು 22ನೇ ಸ್ಥಾನಗಳಲ್ಲಿದ್ದಾರೆ. ಅಫ್ಗಾನಿಸ್ತಾನದ ರಶೀದ್‌ ಖಾನ್‌ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ.

ತಂಡಗಳ ಪಟ್ಟಿಯಲ್ಲಿ ಪಾಕಿಸ್ತಾನ ಮೊದಲ ಸ್ಥಾನದಲ್ಲಿದ್ದು, ಭಾರತ ಎರಡನೇ ಸ್ಥಾನದಲ್ಲಿ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.