ADVERTISEMENT

ICC Women's World Cup: ಬೆಂಗಳೂರಿನಲ್ಲಿ ಮೊದಲ ಪಂದ್ಯ

ಸೆಪ್ಟೆಂಬರ್ 30ರಿಂದ ಆರಂಭ; ಭಾರತ–ಶ್ರೀಲಂಕಾ ಜಂಟಿ ಆಯೋಜನೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 16:03 IST
Last Updated 2 ಜೂನ್ 2025, 16:03 IST
ಐಸಿಸಿ ಮಹಿಳೆಯರ ಏಕದಿನ ವಿಶ್ವಕಪ್‌– 2025ರ ಪಂದ್ಯಗಳ ವೇಳಾಪಟ್ಟಿ –ಐಸಿಸಿ ಜಾಲತಾಣದ ಚಿತ್ರ
ಐಸಿಸಿ ಮಹಿಳೆಯರ ಏಕದಿನ ವಿಶ್ವಕಪ್‌– 2025ರ ಪಂದ್ಯಗಳ ವೇಳಾಪಟ್ಟಿ –ಐಸಿಸಿ ಜಾಲತಾಣದ ಚಿತ್ರ   

ದುಬೈ: ಏಕದಿನ ಕ್ರಿಕೆಟ್ ಮಹಿಳೆಯರ ವಿಶ್ವಕಪ್ ಟೂರ್ನಿಯು ಸೆಪ್ಟೆಂಬರ್ 30ರಿಂದ ಆರಂಭವಾಗಲಿವೆ. ಉದ್ಘಾಟನಾ ಪಂದ್ಯವು ಬೆಂಗಳೂರಿನಲ್ಲಿ ಆಯೋಜನೆಗೊಳ್ಳಲಿದೆ.

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಟೂರ್ನಿಯನ್ನು ಆಯೋಜಿಸಲಿವೆ. ಬೆಂಗಳೂರು, ಗುವಾಹಟಿ, ಇಂದೋರ್‌, ವಿಶಾಖಪಟ್ಟಣ ಹಾಗೂ ಕೊಲಂಬೊದಲ್ಲಿ ಪಂದ್ಯಗಳು ನಡೆಯಲಿವೆ. ಪಾಕಿಸ್ತಾನವು ತಮ್ಮ ತಂಡವನ್ನು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಿದೆ. ಹಾಗಾಗಿ, ಪಾಕಿಸ್ತಾನ ತಂಡ ಆಡುವ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ (ಕೊಲಂಬೊ) ನಿಗದಿಪಡಿಸಲಾಗಿದೆ ಎಂದು ಐಸಿಸಿ ತಿಳಿಸಿದೆ.

ಮೊದಲ ಸೆಮಿಫೈನಲ್‌ ಪಂದ್ಯ ಅಕ್ಟೋಬರ್‌ 29ರಂದು ಗುವಾಹಟಿ ಅಥವಾ ಕೊಲಂಬೊದಲ್ಲಿ, ಎರಡನೇ ಸೆಮಿಫೈನಲ್‌ ಪಂದ್ಯ ಅಕ್ಟೋಬರ್‌ 30ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಫೈನಲ್‌ ಪಂದ್ಯವು ನವೆಂಬರ್‌ 2ರಂದು ಬೆಂಗಳೂರು ಅಥವಾ ಕೊಲಂಬೊದಲ್ಲಿ ನಡೆಯಲಿದೆ.

ADVERTISEMENT

ಆತಿಥೇಯ ಭಾರತ, ಶ್ರೀಲಂಕಾ ಹಾಗೂ ಹಾಲಿ ಚಾಂಪಿಯನ್‌ ಆಸ್ಟ್ರೇಲಿಯಾ, ಇಂಗ್ಲೆಂಡ್‌, ನ್ಯೂಜಿಲೆಂಡ್‌, ದಕ್ಷಿಣ ಆಫ್ರಿಕಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಪ್ರಶಸ್ತಿಗಾಗಿ ಸೆಣೆಸಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.