ಪರ್ತ್:ಥಾಯ್ಲೆಂಡ್ ವಿರುದ್ಧದ ಪಂದ್ಯದಲ್ಲಿವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಗೆಲುವು ಸಾಧಿಸುವುದರೊಂದಿಗೆ, ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಜಯದ ಆರಂಭ ಕಂಡವು.
ಇಂದು ಇಲ್ಲಿನ ವೆಸ್ಟರ್ನ್ ಆಸ್ಟ್ರೇಲಿಯಾ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿನಡೆದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಥಾಯ್ಲೆಂಡ್, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 78 ರನ್ ಗಳಿಸಿತು. ಈ ತಂಡದ ವಿಕೆಟ್ ಕೀಪರ್ ನನ್ನಾಪತ್ ಕೊಂಚಾರೊಯೆಂಕೈ (33) ಹಾಗೂ ನರುಎಮೊಲ್ ಛೈವೈ (13) ಹೊರತುಪಡಿಸಿ ಉಳಿದವರ್ಯಾರೂ ಎರಡಂಕಿ ಮುಟ್ಟಲಿಲ್ಲ.
ವಿಂಡೀಸ್ ನಾಯಕಿ ಸ್ಟಫಾನಿ ಟೇಲರ್ ಕೇವಲ 13 ರನ್ ನೀಡಿ 3 ವಿಕೆಟ್ ಪಡೆದರು. ಬ್ಯಾಟಿಂಗ್‌ನಲ್ಲೂ ಮಿಂಚಿದ ಅವರು ಅಜೇಯ 26 ರನ್ ಗಳಿಸಿ ತಮ್ಮ ತಂಡಕ್ಕೆ 7 ವಿಕೆಟ್ ಜಯ ತಂದುಕೊಟ್ಟರು.
ಬಳಿಕ ಬ್ಯಾಟಿಂಗ್ ಮಾಡಿದ ವಿಂಡೀಸ್,16.4 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಲಂಕಾ ಎದುರು ಕಿವೀಸ್‌ಗೆ ಜಯ
ಇದೇ ಅಂಗಳದಲ್ಲಿ ನಡೆದ ಇನ್ನೊಂದುಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಶ್ರೀಲಂಕಾವನ್ನು ಮಣಿಸಿತು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಲಂಕಾನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 127 ರನ್ ಗಳಿಸಿತು.
ಈ ಮೊತ್ತದೆದರು ಇನಿಂಗ್ಸ್ ಆರಂಭಿಸಿರುವ ಕಿವೀಸ್ ಇನ್ನೂ 20 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.ನಾಯಕಿ ಸೊಫಿ ಡಿವೈನ್ ಕೇವಲ 55 ಎಸೆತಗಳಲ್ಲಿ ಎರಡು ಭರ್ಜರಿ ಸಿಕ್ಸರ್, 6 ಬೌಂಡರಿ ಸಹಿತ 75 ರನ್ ಗಳಿಸಿ ತಮ್ಮ ತಂಡದ ಗೆಲುವಿಗೆ ಉಪಯುಕ್ತ ಕೊಡುಗೆ ನೀಡಿದರು.
ನಾಳೆ ಇಲ್ಲಿಯೇ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಮಹಿಳೆಯರು ಸೆಣಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.