
ಆ್ಯಶ್ಲಿ ಗಾರ್ಡನರ್ ಮತ್ತು ಕಿಮ್ ಗಾರ್ತ್
ಇಂದೋರ್: ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡವು 89 ರನ್ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.
ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು ಆ್ಯಶ್ಲಿ ಗಾರ್ಡನರ್ ಶತಕದ (115) ಬಲದಿಂದ 49.3 ಓವರ್‌ಗಳಲ್ಲಿ 326 ರನ್ ಗಳಿಸಿ ಆಲೌಟ್ ಆಗಿತ್ತು.
327 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡ 43.2 ಓವರ್‌ಗಳಲ್ಲಿ 237 ರನ್ ಗಳಿಸಲಷ್ಟೇ ಶಕ್ತವಾಯಿತು.
ನ್ಯೂಜಿಲೆಂಡ್ ತಂಡದ ನಾಯಕಿ ಸೋಫಿ ಡಿವೈನ್ 112 ಎಸೆತಗಳಲ್ಲಿ 3 ಸಿಕ್ಸರ್, 12 ಬೌಂಡರಿ ಸಹಿತಿ 112 ರನ್ ಗಳಿಸಿದರು. ಉಳಿದಂತೆ ಆರಂಭಿಕ ಜೋಡಿ ಸೇರಿದಂತೆ ಇನ್ನುಳಿದ ಬ್ಯಾಟರ್‌ಗಳು ನಿರೀಕ್ಷಿತ ಆಟವಾಡಲು ವಿಫಲರಾಗಿದ್ದಾರೆ.
ಆಸ್ಟ್ರೇಲಿಯಾ ಪರ ಸೋಫಿ ಮೊಲಿನೆಕ್ಸ್ , ಅನ್ನಾಬೆಲ್ ಸದರ್ಲ್ಯಾಂಡ್ ತಲಾ ಮೂರು ವಿಕೆಟ್ ಪಡೆದರೆ, ಅಲಾನಾ ಕಿಂಗ್ ಎರಡು ವಿಕೆಟ್ ಕಬಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.