ಪ್ರತಿಕಾ ರಾವಲ್ ಮತ್ತು ಸ್ಮೃತಿ ಮಂದಾನ
–ಪಿಟಿಐ ಚಿತ್ರ
ವಿಶಾಖಪಟ್ಟಣ: ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಬೃಹತ್ ಮೊತ್ತ ಪೇರಿಸಿದೆ.
ವಿಶಾಖಪಟ್ಟಣದ ಎಸಿಎ–ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, 20 ಓವರ್‌ಗಳಲ್ಲಿ 330 ರನ್ ಗಳಿಸಿ ಆಲೌಟ್ ಆಗಿದೆ.
ಭಾರತದ ಪರ ಆರಂಭಿಕ ಜೋಡಿ ಸ್ಮೃತಿ ಮಂದಾನ 80, ಪ್ರತಿಕಾ ರಾವಲ್ 75 ರನ್ ಗಳಿಸುವ ಮೂಲಕ ಉತ್ತಮ ಜೊತೆಯಾಟ ಆಡಿದರು. ಉಳಿದಂತೆ ಹರ್ಲೀನ್ ಡಿಯೋಲ್ 38, ಜೆಮಿಮಾ ರೋಡ್ರಿಗಸ್ 33, ರಿಚಾ ಘೋಷ್ 32, ಹರ್ಮನ್‌ಪ್ರೀತ್ ಕೌರ್ 22 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದಾರೆ.
ಆಸ್ಟ್ರೇಲಿಯಾ ಪರ ಅನ್ನಾಬೆಲ್ ಸದರ್ಲ್ಯಾಂಡ್ 5, ಸೋಫಿ ಮೊಲಿನಿಯಕ್ಸ್ 3, ಆಶ್ಲೀಗ್ ಗಾರ್ಡ್ನರ್ ಹಾಗೂ ಮೇಗನ್ ಶುಟ್ ತಲಾ ಒಂದೊಂದು ವಿಕೆಟ್ ಕಬಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.