
ಚಿತ್ರ ಕೃಪೆ: ಐಸಿಸಿ
ಗುವಾಹಟಿ: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಂದು (ಶುಕ್ರವಾರ) ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ 100 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಇದರೊಂದಿಗೆ ಟೂರ್ನಿಯಲ್ಲಿ ಸತತ ಎರಡು ಸೋಲುಗಳ ಬಳಿಕ ಹ್ಯಾಟ್ರಿಕ್ ಸೋಲು ತಪ್ಪಿಸಿಕೊಂಡಿರುವ ಕಿವೀಸ್ ಪಡೆ ಗೆಲುವಿನ ಹಾದಿಗೆ ಮರಳಿದೆ.
ಅತ್ತ ಬಾಂಗ್ಲಾದೇಶ ಸಹ ಮೂರು ಪಂದ್ಯಗಳಲ್ಲಿ ಎರಡನೇ ಸೋಲನುಭವಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ ನಿಗದಿತ 50 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 227 ರನ್ ಪೇರಿಸಿತು.
ಈ ಗುರಿ ಬೆನ್ನಟ್ಟಿದ ಬಾಂಗ್ಲಾ 39.5 ಓವರ್‌ಗಳಲ್ಲಿ 127 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.
ಅಗ್ರ ಕ್ರಮಾಂಕದ ಬ್ಯಾಟರ್‌ಗಳು ವೈಫಲ್ಯ ಅನುಭವಿಸಿದರು. ಅಲ್ಲದೆ 33 ರನ್ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡಿತು. ಫಾತಿಮಾ ಖಾತುನ್ ಗರಿಷ್ಠ 34 ರನ್ ಗಳಿಸಿದರು.
ನ್ಯೂಜಿಲೆಂಡ್ ಪರ ಜೆಸ್ ಕೆರ್ ಹಾಗೂ ಲೀ ತಹುಹು ತಲಾ ಮೂರು ವಿಕೆಟ್ ಗಳಿಸಿದರು.
ಸಾಧಾರಣ ಮೊತ್ತ ಪೇರಿಸಿದ ಕಿವೀಸ್...
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಂದು (ಶುಕ್ರವಾರ) ನಡೆಯುತ್ತಿರುವ ಪಂದ್ಯದಲ್ಲಿ ಬಾಂಗ್ಲಾದೇಶದ ಗೆಲುವಿಗೆ ನ್ಯೂಜಿಲೆಂಡ್ 228 ರನ್‌ಗಳ ಗುರಿ ಒಡ್ಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ ನಿಗದಿತ 50 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತು.
ಕಿವೀಸ್‌ನ ಆರಂಭ ಉತ್ತಮವಾಗಿರಲಿಲ್ಲ. 38 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಆದರೆ ಮಧ್ಯಮ ಕ್ರಮಾಂಕದಲ್ಲಿ ಶತಕದ ಜೊತೆಯಾಟ ಕಟ್ಟಿದ ನಾಯಕಿ ಸೋಫಿ ಡಿವೈನ್ ಹಾಗೂ ಬ್ರೂಕ್ ಹ್ಯಾಲಿಡೇ ತಂಡವನ್ನು ಮುನ್ನಡೆಸಿದರು.
ಸೋಫಿ ಹಾಗೂ ಬ್ರೂಕ್ ನಾಲ್ಕನೇ ವಿಕೆಟ್‌ಗೆ 112 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು.
ಬ್ರೂಕ್ 69 ಹಾಗೂ ಸೋಫಿ 63 ರನ್‌ಗಳ ಆಕರ್ಷಕ ಇನಿಂಗ್ಸ್ ಕಟ್ಟಿದರು. ಬಾಂಗ್ಲಾ ಪರ ರಬೆಯಾ ಕಾನ್ ಮೂರು ವಿಕಟ್ ಗಳಿಸಿದರು.
ಸತತ ಎರಡು ಸೋಲುಗಳನ್ನು ಕಂಡಿರುವ ನ್ಯೂಜಿಲೆಂಡ್ ಟೂರ್ನಿಯಲ್ಲಿ ಮೊದಲ ಗೆಲುವಿನ ಹುಡುಕಾಟದಲ್ಲಿದೆ. ಅತ್ತ ಬಾಂಗ್ಲಾದೇಶ ಆಡಿರುವ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಗೆದ್ದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.