ADVERTISEMENT

ICC World Cup 2023: ಭಾರತದ ಮೇಲೆ ಹೆಚ್ಚಿನ ಒತ್ತಡ: ಅಖ್ತರ್

ಪಿಟಿಐ
Published 7 ಸೆಪ್ಟೆಂಬರ್ 2023, 15:47 IST
Last Updated 7 ಸೆಪ್ಟೆಂಬರ್ 2023, 15:47 IST
<div class="paragraphs"><p>(ರಾಯಿಟರ್ಸ್ ಚಿತ್ರ)</p></div>

(ರಾಯಿಟರ್ಸ್ ಚಿತ್ರ)

   

ನವದೆಹಲಿ: ತವರಿನಲ್ಲಿ ನಡೆಯಲಿರುವ ಮುಂಬರುವ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತದ ಮೇಲೆ ಹೆಚ್ಚಿನ ಒತ್ತಡ ಇರಲಿದೆ ಎಂದು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯಬ್ ಅಖ್ತರ್ ಹೇಳಿದ್ದಾರೆ.

ಇನ್ನೊಂದೆಡೆ ಪಾಕಿಸ್ತಾನದ ಮೇಲೆ ಯಾವುದೇ ಒತ್ತಡ ಇರುವುದಿಲ್ಲ. ಅಲ್ಲದೆ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ADVERTISEMENT

ಏಕದಿನದಲ್ಲಿ ನಂ.1 ತಂಡ ಆಗಿರುವ ಪಾಕಿಸ್ತಾನ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯಲಿದೆ ಎಂದು ಸಹ ಅಖ್ತರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಕ್ರೀಡಾಂಗಣಗಳು ಅಭಿಮಾನಿಗಳಿಂದ ತುಂಬಿರಲಿವೆ. ಎರಡು ಶತಕೋಟಿಗೂ ಹೆಚ್ಚು ಮಂದಿ ಟಿ.ವಿ ಹಾಗೂ ಸಾಮಾಜಿಕ ಮಾಧ್ಯಮದಲ್ಲಿ ಲೈವ್ ನೋಡುತ್ತಾರೆ. ಭಾರತೀಯ ಮಾಧ್ಯಮಗಳು ಪಾಕಿಸ್ತಾನದ ಮೇಲೆ ಹೆಚ್ಚಿನ ಒತ್ತಡ ಹೇರಬಹುದು. ಮಹಾಭಾರತದಂತೆ ಬಿಂಬಿಸಬಹುದು. ಆಗಲೇ ಭಾರತ ವಿನ್ನರ್ ಎಂದು ಘೋಷಿಸಬಹುದು. ಈ ಮೂಲಕ ಅನಿಯಮಿತ ಒತ್ತಡ ಸೃಷ್ಟಿಸಲು ಪ್ರಯತ್ನಿಸಬಹುದು. ಆದರೆ ಇವೆಲ್ಲದರಿಂದ ರೋಹಿತ್ ಶರ್ಮಾ ಬಳಗವು ಹೆಚ್ಚಿನ ಒತ್ತಡಕ್ಕೆ ಒಳಗಾಗಲಿದೆ ಎಂದು ಹೇಳಿದ್ದಾರೆ.

ಭಾರತ ತಂಡ ಅಸ್ಥಿರವಾಗಿದ್ದು, ಕಳೆದೆರಡು ವರ್ಷಗಳಲ್ಲಿ ಆಡುವ ಬಳಗದಲ್ಲಿ ಸ್ಥಿರತೆ ಕಂಡುಬಂದಿಲ್ಲ ಎಂದು ಅಖ್ತರ್ ಟೀಕಿಸಿದ್ದಾರೆ.

ಏಕದಿನ ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 14ರಂದು ನಡೆಯಲಿದೆ. ಇದಕ್ಕೂ ಮೊದಲು ಏಷ್ಯಾ ಕಪ್‌ನಲ್ಲಿ ಮುಖಾಮುಖಿಯಾಗುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.