ADVERTISEMENT

PHOTOS | ಆಸೀಸ್ ಮಣಿಸಿದ ಭಾರತ ಫೈನಲ್‌ಗೆ; ಪ್ರಶಸ್ತಿಗೆ ಇನ್ನು ಒಂದೇ ಮೆಟ್ಟಿಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಅಕ್ಟೋಬರ್ 2025, 2:52 IST
Last Updated 31 ಅಕ್ಟೋಬರ್ 2025, 2:52 IST
<div class="paragraphs"><p>ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ಟೂರ್ನಿಯಲ್ಲಿ ಹಾಲಿ ಚಾಂಪಿಯನ್, ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಐದು ವಿಕೆಟ್ ಅಂತರದ ಮಣಿಸಿದ ಭಾರತ, ಫೈನಲ್‌ಗೆ ಲಗ್ಗೆ ಇಟ್ಟಿದೆ.</p></div>

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ಟೂರ್ನಿಯಲ್ಲಿ ಹಾಲಿ ಚಾಂಪಿಯನ್, ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಐದು ವಿಕೆಟ್ ಅಂತರದ ಮಣಿಸಿದ ಭಾರತ, ಫೈನಲ್‌ಗೆ ಲಗ್ಗೆ ಇಟ್ಟಿದೆ.

   

(ಚಿತ್ರ ಕೃಪೆ:X/@BCCIWomen)

ನವಿ ಮುಂಬೈಯಲ್ಲಿ ಗುರುವಾರ ನಡೆದ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಆಸೀಸ್ ಒಡ್ಡಿದ 339 ರನ್ ಗೆಲುವಿನ ಗುರಿ ಬೆನ್ನಟ್ಟಿದ ಭಾರತ ಇನ್ನೂ ಒಂಬತ್ತು ಎಸೆತಗಳು ಬಾಕಿ ಇರುವಂತೆಯೇ ಐದು ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿತು.

ADVERTISEMENT

ಆಕರ್ಷಕ ಆಟವಾಡಿದ ಜೆಮಿಮಾ ರಾಡ್ರಿಗಸ್‌ ಅಜೇಯ ಶತಕ (127*, 134 ಎಸೆತ, 14 ಬೌಂಡರಿ) ಹಾಗೂ ನಾಯಕಿ ಹರ್ಮನ್‌‌ಪ್ರೀತ್ ಕೌರ್ ಅರ್ಧಶತಕ (89, 88 ಎಸೆತ, 10 ಬೌಂಡರಿ, 2 ಸಿಕ್ಸರ್) ಗಳಿಸಿ ಆತಿಥೇಯ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಮಹಿಳಾ ಏಕದಿನ ಕ್ರಿಕೆಟ್‌ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಬೆನ್ನಟ್ಟಿದ ದಾಖಲೆಗೆ ಭಾರತ ಭಾಜನವಾಗಿದೆ.

ಐಸಿಸಿ ಏಕದಿನ ವಿಶ್ವಕಪ್ ನಾಕೌಟ್ ಹಂತದಲ್ಲಿ (ಪುರುಷರ ವಿಭಾಗ ಸೇರಿದಂತೆ) 300ಕ್ಕೂ ಹೆಚ್ಚು ರನ್ ಇದೇ ಮೊದಲ ಬಾರಿಗೆ ಚೇಸ್ ಮಾಡಿದ ನಿದರ್ಶನ ಇದಾಗಿದೆ.

341 ರನ್ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ಗಳಿಸಿದ ಗರಿಷ್ಠ ಮೊತ್ತವಾಗಿದೆ.

ಚೊಚ್ಚಲ ಕಿರೀಟದ ನಿರೀಕ್ಷೆಯಲ್ಲಿರುವ ಭಾರತ ತಂಡವು ಮೂರನೇ ಬಾರಿಗೆ ವಿಶ್ವಕಪ್‌ನಲ್ಲಿ ಫೈನಲ್‌ಗೇರಿದ ಸಾಧನೆ ಮಾಡಿದೆ.

ಈ ಹಿಂದೆ 2005 ಮತ್ತು 2017ರಲ್ಲಿ ಪ್ರಶಸ್ತಿ ಸುತ್ತು ತಲುಪಿತ್ತು.

ಭಾನುವಾರ ನವಿ ಮುಂಬೈಯಲ್ಲಿ ನಡೆಯಲಿರುವ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಪ್ರಶಸ್ತಿಗಾಗಿ ದಕ್ಷಿಣ ಆಫ್ರಿಕಾದ ವಿರುದ್ದ ಸೆಣಸಲಿದೆ.

ಇದೇ ಮೊದಲ ಬಾರಿ ಮಹಿಳಾ ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಅಥವಾ ಇಂಗ್ಲೆಂಡ್ ಹೊರತಾದ ತಂಡಗಳು ಫೈನಲ್‌ನಲ್ಲಿ ಕಾಣಿಸಿಕೊಂಡಿವೆ.

ಇದರೊಂದಿಗೆ ಆಸ್ಟ್ರೇಲಿಯಾ ತಂಡದ ಸತತ 15 ಪಂದ್ಯಗಳ ಗೆಲುವಿನ ಓಟಕ್ಕೆ ತೆರೆಬಿತ್ತು. ಆಸೀಸ್ ತಂಡವು ಕೊನೆಯದಾಗಿ 2017ರಲ್ಲಿ ಭಾರತ ವಿರುದ್ಧವೇ ಸೆಮಿಫೈನಲ್‌ನಲ್ಲಿ ಪರಾಭವಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.