ADVERTISEMENT

WTC Rankings: ಅಗ್ರಸ್ಥಾನದಲ್ಲಿ ಭಾರತ; 8ನೇ ಸ್ಥಾನದಲ್ಲಿ ಇಂಗ್ಲೆಂಡ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಮಾರ್ಚ್ 2024, 12:09 IST
Last Updated 9 ಮಾರ್ಚ್ 2024, 12:09 IST
<div class="paragraphs"><p>ಟೀಮ್ ಇಂಡಿಯಾ ಆಟಗಾರರ ಸಂಭ್ರಮ</p></div>

ಟೀಮ್ ಇಂಡಿಯಾ ಆಟಗಾರರ ಸಂಭ್ರಮ

   

(ಪಿಟಿಐ ಚಿತ್ರ)

ಧರ್ಮಶಾಲಾ: ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 4-1ರ ಅಂತರದಲ್ಲಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (ಡಬ್ಲ್ಯುಟಿಸಿ) ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಭದ್ರವಾಗಿಸಿದೆ.

ADVERTISEMENT

ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತ್ತು. ಈಗ ಧರ್ಮಶಾಲಾದಲ್ಲಿ ಇಂಗ್ಲೆಂಡ್ ವಿರುದ್ಧ ಗೆಲ್ಲುವುದರೊಂದಿಗೆ ಮಹತ್ವದ 12 ಅಂಕಗಳನ್ನು ಗಳಿಸಿದೆ. ಇದರೊಂದಿಗೆ ಒಟ್ಟು ಅಂಕ 74ಕ್ಕೆ ಏರಿಕೆಯಾಗಿದೆ.

ರೋಹಿತ್ ಶರ್ಮಾ ಬಳಗ ಶೇಕಡಾವಾರು ಅಂಕ 64.58ರಿಂದ 68.51ಕ್ಕೆ ವೃದ್ಧಿಸಿಕೊಂಡಿದೆ. ಆ ಮೂಲಕ ತನ್ನ ಸ್ಥಾನವನ್ನು ಮತ್ತಷ್ಟು ಉತ್ತಮಪಡಿಸಿದೆ. ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ 60ರ ಪರ್ಸಂಟೇಜ್ ಹೊಂದಿದೆ.

ಎರಡು ಬಾರಿಯ ರನ್ನರ್-ಅಪ್ ಭಾರತ, 2023-25ರ ಡಬ್ಲ್ಯುಟಿಸಿ ಋತುವಿನಲ್ಲಿ ಈವರೆಗೆ ಆಡಿರುವ ಒಂಬತ್ತು ಪಂದ್ಯಗಳಲ್ಲಿ ಆರು ಗೆಲುವುಗಳನ್ನು ದಾಖಲಿಸಿದೆ. ಎರಡಲ್ಲಿ ಸೋಲು ಮತ್ತು ಒಂದರಲ್ಲಿ ಡ್ರಾ ಕಂಡಿದೆ.

ಮತ್ತೊಂದೆಡೆ ಮೊದಲ ಪಂದ್ಯವನ್ನು ಗೆದ್ದರೂ ಬಳಿಕ ಸತತ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿರುವ ಇಂಗ್ಲೆಂಡ್ ಎಂಟನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ಈವರೆಗೆ ಆಡಿರುವ 10 ಪಂದ್ಯಗಳ ಪೈಕಿ ಆರರಲ್ಲಿ ಪರಾಭವಗೊಂಡಿದೆ. ಶೇಕಡಾವಾರು ಪಾಯಿಂಟ್ಸ್ 17.5 ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.