ADVERTISEMENT

Ind v SA 2nd ODI: ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ, ಬ್ಯಾಟಿಂಗ್ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಅಕ್ಟೋಬರ್ 2022, 7:56 IST
Last Updated 9 ಅಕ್ಟೋಬರ್ 2022, 7:56 IST
ಶಿಖರ್ ಧವನ್ ಮತ್ತು ಕೇಶವ್ ಮಹಾರಾಜ
ಶಿಖರ್ ಧವನ್ ಮತ್ತು ಕೇಶವ್ ಮಹಾರಾಜ   

ರಾಂಚಿ: ಭಾರತ ವಿರುದ್ಧದ ಎರಡನೇ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಜಾರ್ಖಂಡ್ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಲಿ‌ರುವ ಈ ಪಂದ್ಯದಲ್ಲಿ ಪ್ರವಾಸಿ ಬಳಗವು ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿದೆ.

ಲಖನೌನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶಿಖರ್ ಧವನ್ ನಾಯಕತ್ವದ ಭಾರತ ತಂಡ ಡೆತ್‌ ಓವರ್‌ ಬೌಲಿಂಗ್‌ನಲ್ಲಿ ಎಡವಿತ್ತು. ಬ್ಯಾಟಿಂಗ್‌ನಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಅವರ ವಿರೋಚಿತ ಅರ್ಧಶತಕಗಳು ತಂಡದ ಸೋಲಿನ ಅಂತರ ಕಡಿಮೆ ಮಾಡಿದ್ದವು. ಆದರೆ ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯ ತಂಡವನ್ನು ಕಾಡಿತ್ತು.

ADVERTISEMENT

ಭಾರತ ತಂಡವು ಎಲ್ಲ ವಿಭಾಗಗಳಲ್ಲಿಯೂ ಲಯಕ್ಕೆ ಮರಳುವ ಸವಾಲಿನೊಂದಿಗೆ ಭಾನುವಾರ ದಕ್ಷಿಣ ಆಫ್ರಿಕಾ ಎದುರಿನ ಎರಡನೇ ಎಕದಿನ ಪಂದ್ಯದಲ್ಲಿ ಕಣಕ್ಕಿಳಿದಿದೆ.

ಇದೀಗ ಮಧ್ಯಮವೇಗಿ ದೀಪಕ್ ಚಾಹರ್ ಗಾಯಗೊಂಡು ಹೊರನಡೆದಿರುವುದರಿಂದ ಶಾರ್ದೂಲ್ ಠಾಕೂರ್ ಮೇಲೆ ಹೆಚ್ಚು ಒತ್ತಡ ಬೀಳುವುದು ಖಚಿತ. ಸ್ಫೋಟಕ ಶೈಲಿಯ ಬ್ಯಾಟರ್‌ಗಳಾದ ಡೇವಿಡ್ ಮಿಲ್ಲರ್ ಹಾಗೂ ಹೆನ್ರಿಚ್ ಕ್ಲಾಸನ್ ಅವರನ್ನು ಕಟ್ಟಿಹಾಕುವ ಸವಾಲು ಬೌಲರ್‌ಗಳಿಗೆ ಇದೆ.

ತಂಡಗಳು
ಭಾರತ:
ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮದ್ ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಆವೇಶ್ ಖಾನ್, ಮೊಹಮ್ಮದ್ ಸಿರಾಜ್

ದಕ್ಷಿಣ ಆಫ್ರಿಕಾ: ಕೇಶವ್ ಮಹಾರಾಜ (ನಾಯಕ), ಜೆನ್ಮನ್ ಮಲಾನ್, ಕ್ವಿಂಟನ್ ಡಿಕಾಕ್, ರೀಜಾ ಹೆನ್ರಿಕ್ಸ್, ಏಡನ್ ಮರ್ಕರಂ, ಹೆನ್ರಿಚ್ ಕ್ಲಾಸನ್, ಡೇವಿಡ್ ಮಿಲ್ಲರ್, ವೇನ್ ಪಾರ್ನೆಲ್, ಕಗಿಸೊ ರಬಾಡ, ಹೆನ್ರಿಚ್ ನಾಕಿಯಾ, ಜಾರ್ನ್ ಫಾರ್ಚುಯಿನ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.