ADVERTISEMENT

ಬಾಕ್ಸಿಂಗ್ ಡೇ ಟೆಸ್ಟ್‌: ಆಸ್ಟ್ರೇಲಿಯಾಗೆ ಆಘಾತ ನೀಡಿದ ಬೂಮ್ರಾ, ಅಶ್ವಿನ್

ಏಜೆನ್ಸೀಸ್
Published 26 ಡಿಸೆಂಬರ್ 2020, 1:41 IST
Last Updated 26 ಡಿಸೆಂಬರ್ 2020, 1:41 IST
ಭಾರತ ತಂಡ
ಭಾರತ ತಂಡ   

‌ಮೆಲ್ಬರ್ನ್: ಆಸ್ಟ್ರೇಲಿಯಾ ಎದುರಿನ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿದೆ.

ಹಂಗಾಮಿ ನಾಯಕ ಅಜಿಂಕ್ಯ ರಹಾನೆ ನೇತೃತ್ವದ ಭಾರತೀಯ ತಂಡ ಆಸ್ಟ್ರೇಲಿಯಾಗೆ ಆರಂಭಿಕ ಆಘಾತ ನೀಡಿತು. ಜೋ ಬರ್ನ್ಸ್ ಅವರನ್ನು ಬೂಮ್ರಾ ಶೂನ್ಯಕ್ಕೆ ಔಟ್‌ ಮಾಡುವ ಮೂಲಕ ಮೊದಲ ವಿಕೆಟ್‌ ಪಡೆದರು. ನಂತರ ದಾಳಿಗೆ ಇಳಿದ ಅಶ್ವಿನ್‌ ಚುರುಕಾಗಿ 2 ವಿಕೆಟ್‌ ಪಡೆದರು. ಮ್ಯಾಥ್ಯೂ ವೇಡ್ ಹಾಗೂ ಸ್ಟೀವ್ ಸ್ಮಿತ್ ವಿಕೆಟ್‌ ಪಡೆದರು. ಮಿಂಚಿನ ಆಟವಾಡಿದ ವೇಡ್‌ 30 ರನ್‌ ಗಳಿಸಿ ಔಟಾದರು. ಸ್ಮಿತ್‌ ಅವರನ್ನು ಅಶ್ವಿನ್‌ ಶೂನ್ಯಕ್ಕೆ ಔಟ್‌ ಮಾಡಿದರು.

ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಬೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ3 ವಿಕೆಟ್‌ ಕಳೆದುಕೊಂಡು 65ರನ್‌ ಗಳಿಸಿತ್ತು.

ADVERTISEMENT

ಹೋದ ವಾರ ಅಡಿಲೇಡ್‌ನಲ್ಲಿ ಭಾರತ ತಂಡ ಹೀನಾಯ ಸೋಲು ಅನುಭವಿಸಿತ್ತು. ಯುವ ಆಟಗಾರರಾದ ಶುಭ ಮನ್ ಗಿಲ್, ಮೊಹಮ್ಮದ್ ಸಿರಾಜ್ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಮೊದಲ ಟೆಸ್ಟ್‌ನಲ್ಲಿ ವೈಫಲ್ಯ ಅನುಭವಿಸಿದ್ದ ವೃದ್ಧಿಮಾನ್ ಸಹಾ ಅವರಿಗೆ ವಿಶ್ರಾಂತಿ ನೀಡಿ, ವಿಕೆಟ್‌ಕೀಪರ್ ರಿಷಭ್ ಪಂತ್‌ಗೆ ಅವಕಾಶ ನೀಡಲಾಗಿದೆ. ಇನ್ನು ಹನುಮವಿಹಾರಿ ತಂಡದಲ್ಲಿ ಮುಂದುವರಿದಿದ್ದಾರೆ.

ನಾಲ್ಕು ಪಂದ್ಯಗಳ ಬಾರ್ಡರ್‌–ಗಾವಸ್ಕರ್ ಸರಣಿಯಲ್ಲಿ ಆತಿಥೇಯರು 1–0 ಮುನ್ನಡೆ ಸಾಧಿಸಿದ್ದಾರೆ. ಭಾರತ ಈ ಪಂದ್ಯ ಗೆದ್ದು ಸಮಬಲ ಸಾಧಿಸುವ ತವಕದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.