ADVERTISEMENT

IND vs AUS: ಉಮೇಶ್ ಯಾದವ್ ಸ್ಮರಣೀಯ ಸಾಧನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಮಾರ್ಚ್ 2023, 6:31 IST
Last Updated 2 ಮಾರ್ಚ್ 2023, 6:31 IST
ಉಮೇಶ್ ಯಾದವ್
ಉಮೇಶ್ ಯಾದವ್   

ಇಂದೋರ್: ಬಲಗೈ ವೇಗದ ಬೌಲರ್ ಉಮೇಶ್ ಯಾದವ್, ಭಾರತದ ನೆಲದಲ್ಲಿ 100 ವಿಕೆಟ್ ಸಾಧನೆ ಮಾಡಿದ್ದಾರೆ.

ಇಂದೋರ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಉಮೇಶ್, ಸ್ಮರಣೀಯ ಸಾಧನೆ ಮಾಡಿದರು.

ಎರಡನೇ ದಿನದಾಟದಲ್ಲಿ ಕಾಂಗರೂ ಪಡೆಯನ್ನು 197 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಉಮೇಶ್ ಗಮನಾರ್ಹ ಪಾತ್ರ ವಹಿಸಿದರು. 12 ರನ್ ತೆತ್ತು ಮೂರು ವಿಕೆಟ್ ಕಬಳಿಸಿ ಮಿಂಚಿದರು.

ಮೊಹಮ್ಮದ್ ಶಮಿಗೆ ವಿಶ್ರಾಂತಿ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಪಂದ್ಯದಲ್ಲಿ ಆಡುವ ಅವಕಾಶವನ್ನು ಉಮೇಶ್ ಯಾದವ್ ಗಿಟ್ಟಿಸಿಕೊಂಡಿದ್ದರು.

ತವರು ನೆಲದಲ್ಲಿ ಉತ್ತಮ ನಿರ್ವಹಣೆ ನೀಡುತ್ತಿರುವ ಉಮೇಶ್, ವಿದೇಶದಲ್ಲೂ ಈವರೆಗೆ 68 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಮೂಲಕ 55 ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 168 ವಿಕೆಟ್‌ಗಳನ್ನು ಗಳಿಸಿದ್ದಾರೆ.

88 ರನ್‌ಗೆ 6 ವಿಕೆಟ್ ಗಳಿಸಿರುವುದು ಜೀವನಶ್ರೇಷ್ಠ ಸಾಧನೆಯಾಗಿದೆ. ಇನ್ನು ಮೂರು ಬಾರಿ ಐದು ವಿಕೆಟ್ ಸಾಧನೆ ಮಾಡಿದ್ದಾರೆ.

24 ಸಿಕ್ಸರ್: ಕೊಹ್ಲಿ ದಾಖಲೆ ಸರಿಗಟ್ಟಿದ ಉಮೇಶ್...
ಮೊದಲ ದಿನದಾಟದಲ್ಲಿ ಬ್ಯಾಟಿಂಗ್‌ನಲ್ಲೂ 17 ರನ್‌ಗಳ ಕಾಣಿಕೆ ನೀಡಿರುವ ಉಮೇಶ್, ಎರಡು ಸಿಕ್ಸರ್ ಬಾರಿಸಿದ್ದರು.

ಈ ಮೂಲಕ ಟೆಸ್ಟ್ ವೃತ್ತಿ ಜೀವನದಲ್ಲಿ ಈವರೆಗೆ 24 ಸಿಕ್ಸರ್‌ಗಳ ಸಾಧನೆ ಮಾಡಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದಕ್ಕಾಗಿ ಕೊಹ್ಲಿ 181 ಇನಿಂಗ್ಸ್ ತೆಗೆದುಕೊಂಡಿದ್ದರೆ ಉಮೇಶ್ 64 ಇನಿಂಗ್ಸ್‌ಗಳಲ್ಲಿ 24 ಸಿಕ್ಸರ್ ಸಿಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.