ADVERTISEMENT

ಭಾರತೀಯರ ಬೌಲಿಂಗ್ ದಾಳಿಗೆ ಕಂಗಾಲಾದ ಕಾಂಗರೂ: 48 ರನ್ ಜಯ ದಾಖಲಿಸಿದ ಟೀಂ ಇಂಡಿಯಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ನವೆಂಬರ್ 2025, 12:19 IST
Last Updated 6 ನವೆಂಬರ್ 2025, 12:19 IST
<div class="paragraphs"><p>ವಿಕೆಟ್ ತೆಗೆದ ಸಂಭ್ರಮದಲ್ಲಿ ಭಾರತೀಯ ಆಟಗಾರರು</p></div>

ವಿಕೆಟ್ ತೆಗೆದ ಸಂಭ್ರಮದಲ್ಲಿ ಭಾರತೀಯ ಆಟಗಾರರು

   

ಚಿತ್ರ: @BCCI

ಕರಾರ (ಗೋಲ್ಡ್ ಕೋಸ್ಟ್): ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದೆ 4ನೇ ಟಿ20 ಪಂದ್ಯದಲ್ಲಿ ಭಾರತ ತಂಡ 48 ರನ್‌ಗಳ ಬೃಹತ್ ಗೆಲುವು ದಾಖಲಿಸಿತು. ಆ ಮೂಲಕ 5 ಪಂದ್ಯಗಳ ಸರಣಿಯಲ್ಲಿ 2–1ರಿಂದ ಮುನ್ನಡೆ ಸಾಧಿಸಿದೆ.

ADVERTISEMENT

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತ್ತು. 168 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಭಾರತೀಯರ ಬೌಲಿಂಗ್ ದಾಳಿಗೆ ನಲುಗಿ ಹೋಯಿತು. ಅಂತಿಮವಾಗಿ ಆಸೀಸ್‌ 18.2 ಓವರ್‌ಗಳಲ್ಲಿ 119\10 ಗಳಿಸಿ ಆಲೌಟ್ ಆಯಿತು.

ಭಾರತದ ಪರ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ವಾಷಿಂಗ್‌ಟನ್ ಸುಂದರ್ 3\3 ವಿಕೆಟ್ ಪಡೆದು ಮಿಂಚಿದರು. ಅಕ್ಸರ್ ಪಟೇಲ್ ಹಾಗೂ ಶಿವಂ ದುಬೆ ತಲಾ 2 ವಿಕೆಟ್ ಪಡೆದುಕೊಂಡರೆ, ಅರ್ಷದೀಪ್ ಸಿಂಗ್, ಜಸ್‌ಪ್ರೀತ್ ಬುಮ್ರಾ ಹಾಗೂ ವರುಣ್ ಚಕ್ರವರ್ತಿ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ಆಸ್ಟ್ರೇಲಿಯಾ ಪರ ನಾಯಕ ಮಿಚೆಲ್ ಮಾರ್ಷ್ (30) ರನ್ ಹಾಗೂ ಮ್ಯಾಥ್ಯೂ ಶಾರ್ಟ್ 25 ರನ್ ಗಳಿಸಿದ್ದು ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್ ಕ್ರೀಸ್ ಕಚ್ಚಿ ಆಡುವಲ್ಲಿ ವಿಫಲರಾದರು.

ಇದಕ್ಕೂ ಮೊದಲು, ಭಾರತದ ಪರ 46 ರನ್ ಗಳಿಸಿದ ಶುಭಮನ್ ಗಿಲ್ ಗರಿಷ್ಠ ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಅಭಿಷೇಕ್ ಶರ್ಮಾ (28), ಶಿವಂ ದುಬೆ (22) ಅಕ್ಸರ್ ಪಟೇಲ್ (ಅಜೇಯ 21) ಹಾಗೂ ನಾಯಕ ಸೂರ್ಯಕುಮಾರ್ ಯಾದವ್ (20) ರನ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು.

ಆಸ್ಟ್ರೇಲಿಯಾ ಪರ ಉತ್ತಮ ಬೌಲಿಂಗ್ ಪ್ರದರ್ಶಿಸಿದ ನಾಥನ್ ಎಲ್ಲಿಸ್ 21‌‌‌‌\3 ಹಾಗೂ ಆಡಂ ಜಂಪಾ 45\3 ವಿಕೆಟ್ ಪಡೆದು ಮಿಂಚಿದರು. ಮಾರ್ಕಸ್ ಸ್ಟೋಯಿನಿಸ್ ಮತ್ತು ಕ್ಸೇವಿಯರ್ ಬಾರ್ಟಿಲೆಟ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.