ADVERTISEMENT

Ashwin Retires: ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಆರ್. ಅಶ್ವಿನ್ ನಿವೃತ್ತಿ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಡಿಸೆಂಬರ್ 2024, 6:00 IST
Last Updated 18 ಡಿಸೆಂಬರ್ 2024, 6:00 IST
<div class="paragraphs"><p>ರವಿಚಂದ್ರನ್ ಅಶ್ವಿನ್</p></div>

ರವಿಚಂದ್ರನ್ ಅಶ್ವಿನ್

   

(ಚಿತ್ರ ಕೃಪೆ: X/@BCCI)

ಬ್ರಿಸ್ಬೇನ್: ಭಾರತೀಯ ಕ್ರಿಕೆಟ್ ತಂಡದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ADVERTISEMENT

ಆಸ್ಟ್ರೇಲಿಯಾದಲ್ಲಿ ಸಾಗುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮಧ್ಯೆ ದಿಢೀರ್ ನಿವೃತ್ತಿ ನಿರ್ಧಾರ ಪ್ರಕಟಿಸಿರುವ ಅಶ್ವಿನ್, ಕ್ರೀಡಾಪ್ರೇಮಿಗಳನ್ನು ಆಶ್ಚರ್ಯಚಕಿತಗೊಳಿಸಿದ್ದಾರೆ.

ಬ್ರಿಸ್ಬೇನ್‌ನ ಗಾಬಾದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾಗೊಂಡಿರುವ ಬೆನ್ನಲ್ಲೇ ಅಶ್ವಿನ್ ನಿವೃತ್ತಿ ನಿರ್ಧಾರವನ್ನು ಬಿಸಿಸಿಐ ಪ್ರಕಟಿಸಿದೆ.

ಕುಂಬ್ಳೆ ಸಾಲಿನಲ್ಲಿ ಅಶ್ವಿನ್...

ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ದಿಗ್ಗಜ ಅನಿಲ್ ಕುಂಬ್ಳೆ (619) ಬಳಿಕ ಅತಿ ಹೆಚ್ಚು ವಿಕೆಟ್ ಗಳಿಸಿದ ದಾಖಲೆ ಅಶ್ವಿನ್ ಹೆಸರಲ್ಲಿದೆ. ಅಶ್ವಿನ್ 106 ಟೆಸ್ಟ್ ಪಂದ್ಯಗಳಲ್ಲಿ 537 ವಿಕೆಟ್ ಗಳಿಸಿದ್ದಾರೆ.

38 ವರ್ಷದ ಅಶ್ವಿನ್, ಅಡಿಲೇಡ್‌ನಲ್ಲಿ ನಡೆದ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಕೊನೆಯದಾಗಿ ಭಾರತದ ಪರ ಆಡಿದ್ದರು. ಅಲ್ಲದೆ ಒಂದು ವಿಕೆಟ್ ಗಳಿಸಿದ್ದರು.

'ನಾನು ನಿಮ್ಮ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಭಾರತೀಯ ಕ್ರಿಕೆಟಿಗನಾಗಿ ಇಂದು ನನ್ನ ಕೊನೆಯ ದಿನ' ಎಂದು ಅಶ್ವಿನ್ ಹೇಳಿದ್ದಾರೆ.

ಗಾಬಾದ ಸ್ಟೇಡಿಯಂನಲ್ಲಿ ಭಾವೋದ್ವೇಗಕ್ಕೊಳಗಾಗಿ ವಿರಾಟ್ ಕೊಹ್ಲಿ ಅವರನ್ನು ಅಶ್ವಿನ್ ತಬ್ಬಿಕೊಳ್ಳುತ್ತಿರುವ ದೃಶ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಮತ್ತೊಂದೆಡೆ ಅಶ್ವಿನ್ ನಿರ್ಧಾರವನ್ನು ಗೌರವಿಸುವುದಾಗಿ ನಾಯಕ ರೋಹಿತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.