ಪರ್ಥ್: ಭಾರತ ವಿರುದ್ಧ ಭಾನುವಾರದಿಂದ(ಅ.19) ಆರಂಭಗೊಳ್ಳಲಿರುವ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಜೋಶ್ ಇಂಗ್ಲಿಸ್ ಹಾಗೂ ಸ್ಪಿನರ್ ಆ್ಯಡಂ ಜಂಪಾ ಅವರು ಅಲಭ್ಯವಾಗಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಭಾರತವು 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ–20 ಸರಣಿಯನ್ನು ಆಡಲಿದೆ.
ಜೋಶ್ ಇಂಗ್ಲಿಸ್ ಅವರು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರ ಜಾಗಕ್ಕೆ ಜೋಶ್ ಫಿಲಿಪ್ ಅವರನ್ನು ಸೇರಿಸಿಕೊಳ್ಳಲಾಗಿದೆ.
ಜಂಪಾ ಅವರ ಜಾಗಕ್ಕೆ ಮ್ಯಾಥ್ಯೂ ಕುಹ್ನೆಮನ್ ಅವರು ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.
ತಂಡದ ಆಯ್ಕೆಗೂ ಮುನ್ನವೇ ಗಾಯದ ಸಮಸ್ಯೆಯಿಂದ ಪ್ಯಾಟ್ ಕಮಿನ್ಸ್ ಅವರು ಟೂರ್ನಿಯಿಂದ ಹೊರಗುಳಿದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.