ADVERTISEMENT

IND vs AUS: ಶಮಿಗೆ 5 ವಿಕೆಟ್; ಆಸ್ಟ್ರೇಲಿಯಾ 276ಕ್ಕೆ ಆಲೌಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಸೆಪ್ಟೆಂಬರ್ 2023, 12:37 IST
Last Updated 22 ಸೆಪ್ಟೆಂಬರ್ 2023, 12:37 IST
<div class="paragraphs"><p>ಮೊಹಮ್ಮದ್ ಶಮಿ</p></div>

ಮೊಹಮ್ಮದ್ ಶಮಿ

   

(ಪಿಟಿಐ ಚಿತ್ರ)

ಮೊಹಾಲಿ: ಅತಿಥೇಯ ಭಾರತ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 276 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ.

ADVERTISEMENT

ಭಾರತದ ಪರ ಮೊಹಮ್ಮದ್ ಶಮಿ 51 ರನ್ನಿಗೆ ಐದು ವಿಕೆಟ್ ಕಬಳಿಸಿದರು. ಈ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದರು.

ಜಸ್‌ಪ್ರೀತ್ ಬೂಮ್ರಾ, ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜ ತಲಾ ಒಂದು ವಿಕೆಟ್ ಪಡೆದರು.

ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ಕೆ.ಎಲ್ ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು.

ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಗರಿಷ್ಠ 52 ರನ್ ಗಳಿಸಿದರು. ಜೋಶ್ ಇಂಗ್ಲಿಸ್ 45, ಸ್ಟೀವ್ ಸ್ಮಿತ್ 41, ಮಾರ್ನಸ್ ಲಾಬುಷೇನ್ 39, ಕ್ಯಾಮರೂನ್ ಗ್ರೀನ್ 31, ಮಾರ್ಕಸ್ ಸ್ಟೋಯಿನಿಸ್ 29 ಮತ್ತು ನಾಯಕ ಪ್ಯಾಟ್ ಕಮಿನ್ಸ್ 21 ರನ್ ಗಳಿಸಿ ಔಟಾಗದೆ ಉಳಿದರು.

ತವರಿನಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಪೂರ್ವ ಸಿದ್ಧತೆ ನಡೆಸಲು ಈ ಸರಣಿ ಭಾರತದ ಪಾಲಿಗೆ ಮಹತ್ವದೆನಿಸಿದೆ. ಮೊದಲೆರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ಕಲ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.