ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಟಾಸ್
ಚಿತ್ರ: @circleofcricket
ಕರಾರ (ಗೋಲ್ಡ್ ಕೋಸ್ಟ್): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಇಲ್ಲಿ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯ 4ನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಆತಿಥೇಯ ಆಸ್ಟ್ರೇಲಿಯಾ ತಂಡ ಇಂದಿನ ಪಂದ್ಯದಲ್ಲಿ ನಾಲ್ಕು ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ಆಡಮ್ ಜಂಪಾ, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಫಿಲಿಪ್ ಮತ್ತು ಬೆನ್ ಡ್ವಾರ್ಷಿಯಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಆದರೆ, ಭಾರತ ತಂಡ ಮೂರನೇ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಕಣಕ್ಕಿಳಿಸಿದೆ.
ಉಭಯ ತಂಡಗಳ ಆಡುವ 11ರ ಬಳಗ
ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್ (ನಾಯಕ), ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಜೋಶ್ ಫಿಲಿಪ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರ್ಶುಯಿಸ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಆಡಮ್ ಜಂಪಾ ಇದ್ದಾರೆ.
ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಿವಂ ದುಬೆ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.