ADVERTISEMENT

IND vs AUS: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ; ಮೂರು ಬದಲಾವಣೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 8:32 IST
Last Updated 2 ನವೆಂಬರ್ 2025, 8:32 IST
   

ಹೋಬಾರ್ಟ್: ಆಸ್ಟ್ರೇಲಿಯಾ ವಿರುದ್ಧ ಇಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದ್ದು, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ ಮತ್ತು ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಲಾಗಿದ್ದು, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್ ಮತ್ತು ಜಿತೇಶ್ ಶರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಎರಡನೇ ಟಿ20ಯಲ್ಲಿ ಭಾರತ ತಂಡ 125ಕ್ಕೆ ಆಲೌಟ್ ಆಗಿತ್ತು. ಈ ಪಂದ್ಯದಲ್ಲಿ ಸ್ಪಿನ್ನರ್ ಕುಲ್ದೀಪ್ ಯಾದವ್ ದುಬಾರಿಯಾಗಿದ್ದರು.

ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ದಾಖಲಿಸಿತ್ತು. ಹೀಗಾಗಿ, ಸರಣಿಯಲ್ಲಿ 0–1ರ ಹಿನ್ನಡೆಯಲ್ಲಿರುವ ಭಾರತ ತಂಡ ಮೂರನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ADVERTISEMENT

ಭಾರತ ತಂಡ: ಶುಭಮನ್ ಗಿಲ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಜಿತೇಶ್ ಶರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ , ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಟಿಮ್ ಡೇವಿಡ್, ಮಿಚೆಲ್ ಓವನ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ಶಾರ್ಟ್, ಸೀನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.