ADVERTISEMENT

ರನ್ ಬರ ಎದುರಿಸುತ್ತಿರುವ 'ರನ್ ಮೆಷಿನ್'; ಕೊಹ್ಲಿ ಮತ್ತೆ ಶೂನ್ಯಕ್ಕೆ ಔಟ್!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಮಾರ್ಚ್ 2021, 14:43 IST
Last Updated 12 ಮಾರ್ಚ್ 2021, 14:43 IST
ಮತ್ತೆ ವೈಫಲ್ಯ ಅನುಭವಿಸಿದ ವಿರಾಟ್ ಕೊಹ್ಲಿ
ಮತ್ತೆ ವೈಫಲ್ಯ ಅನುಭವಿಸಿದ ವಿರಾಟ್ ಕೊಹ್ಲಿ   

ಅಹಮದಾಬಾದ್: ಕಳಪೆ ಫಾರ್ಮ್‌ನಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮಗದೊಮ್ಮೆ ಶೂನ್ಯಕ್ಕೆ ಔಟ್ ಆಗಿದ್ದಾರೆ.

ಇದರೊಂದಿಗೆ ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಈಗ ರನ್ ಬರ ಎದುರಿಸುತ್ತಿರುವುದು ಸಾಬೀತಾಗಿದೆ.

ಅಹಮದಾಬಾದ್‌ನಲ್ಲಿ ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟ್ವೆಂಟಿ-20 ಅಂತರ ರಾಷ್ಟ್ರೀಯ ಪಂದ್ಯದಲ್ಲಿ ಕೇವಲ ಐದು ಎಸೆತಗಳನ್ನು ಎದುರಿಸಿದ ಕೊಹ್ಲಿ ಖಾತೆ ತೆರೆಯಲಾಗದೇ ಪೆವಿಲಿಯನ್‌ಗೆ ಮರಳಿದರು.

ADVERTISEMENT

ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ದಾಳಿಯಲ್ಲಿ ಕ್ರಿಸ್ ಜಾರ್ಡನ್‌ಗೆ ಕ್ಯಾಚಿತ್ತ ವಿರಾಟ್ ಕೊಹ್ಲಿ ನಿರಾಸೆ ಮೂಡಿಸಿದರು.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಎರಡು ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಅಲ್ಲದೆ ಕೊನೆಯ ಟೆಸ್ಟ್ ಪಂದ್ಯದಲ್ಲೂ ರನ್ ಗಳಿಸುವಲ್ಲಿ ವಿಫಲವಾಗಿದ್ದರು.

ಈ ಮೂಲಕ ಸತತವಾಗಿ ಎರಡನೇ ಅಂತರ ರಾಷ್ಟ್ರೀಯ ಪಂದ್ಯದಲ್ಲೂ ಶೂನ್ಯಕ್ಕೆ ಔಟಾಗಿದ್ದಾರೆ. ಅಲ್ಲದೆ ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.