ADVERTISEMENT

Ind vs Eng 1st Test: ಎರಡನೇ ದಿನದಾಟ ಮಳೆಯಿಂದ ರದ್ದು

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 17:19 IST
Last Updated 5 ಆಗಸ್ಟ್ 2021, 17:19 IST
ವಿರಾಟ್ ಕೊಹ್ಲಿ ವಿಕೆಟ್ ಪಡೆದ ಸಂಭ್ರಮದಲ್ಲಿ ಜೇಮ್ಸ್ ಅಂಡರ್ಸನ್: ರಾಯಿಟರ್ಸ್ ಚಿತ್ರ
ವಿರಾಟ್ ಕೊಹ್ಲಿ ವಿಕೆಟ್ ಪಡೆದ ಸಂಭ್ರಮದಲ್ಲಿ ಜೇಮ್ಸ್ ಅಂಡರ್ಸನ್: ರಾಯಿಟರ್ಸ್ ಚಿತ್ರ   

ನಾಟಿಂಗ್‌ಹ್ಯಾಂ: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಎರಡನೇ ದಿನದಾಟ ಮಳೆಯಿಂದ ರದ್ದಾಗಿದೆ.

ಮಳೆಯಿಂದಾಗಿ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಚಹಾ ವಿರಾಮ ಘೋಷಿಸಿದಾಗಮೊದಲ ಇನಿಂಗ್ಸ್‌ನಲ್ಲಿ ಭಾರತ ತಂಡ 4 ವಿಕೆಟ್ ಕಳೆದುಕೊಂಡು 125 ರನ್ ಗಳಿಸಿತ್ತು.

ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್. ರಾಹುಲ್ ಭಾರತ ತಂಡಕ್ಕೆ ಉತ್ತಮ ಆರಂಭ ನೀಡಿದರು. 36 ರನ್ ಗಳಿಸಿದ್ದ ರೋಹಿತ್ ಶರ್ಮಾ ಅವರು ರಾಬಿನ್ ಸನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದ ಬಳಿಕ ಕ್ರೀಸ್‌ಗೆ ಬಂದ ಚೆತೇಶ್ವರ್ ಪೂಜಾರ 4 ರನ್ ಮತ್ತು ವಿರಾಟ್ ಕೊಹ್ಲಿ ಶೂನ್ಯ ಸುತ್ತಿ ಪೆವಿಲಿಯನ್ ಸೇರಿಕೊಂಡರು. ಇವರಿಬ್ಬರನ್ನೂ ಔಟ್ ಮಾಡಿದ ಜೇಮ್ಸ್ ಅಂಡರ್ಸನ್ ಇಂಗ್ಲೆಂಡ್ ತಂಡ ಕಮ್ ಬ್ಯಾಕ್ ಮಾಡಲು ಕಾರಣರಾದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ತಾಳ್ಮೆಯ ಆಟ ಪ್ರದರ್ಶಿಸುತ್ತಿರುವ ಕೆ.ಎಲ್. ರಾಹುಲ್ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ.

ADVERTISEMENT

5 ರನ್ ಗಳಿಸಿದ್ದ ಅಜಿಂಕ್ಯ ರಹಾನೆ ಸಹ ರನೌಟ್ ಆಗಿ ನಿರ್ಗಮಿಸಿದ್ದು, ಇನ್ನೂ 58 ರನ್ ಹಿನ್ನಡೆಯಲ್ಲಿರುವ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.