ADVERTISEMENT

IND vs ENG 2nd Test: ಇಶಾಂತ್ ಇನ್; ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 10:21 IST
Last Updated 12 ಆಗಸ್ಟ್ 2021, 10:21 IST
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ   

ಲಾರ್ಡ್ಸ್: ಪ್ರವಾಸಿ ಭಾರತ ವಿರುದ್ಧ ಆರಂಭವಾಗಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆತಿಥೇಯ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಮಳೆಯಿಂದಾಗಿ ಟಾಸ್ ಅಲ್ಪ ವಿಳಂಬಗೊಂಡಿತ್ತು. ಬಳಿಕ ಟಾಸ್ ಗೆದ್ದ ರೂಟ್, ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು.

ಇಶಾಂತ್ ಇನ್, ಶಾರ್ದೂಲ್ ಔಟ್...
ಭಾರತ ತಂಡದಲ್ಲಿ ಪ್ರಮುಖವಾಗಿ ಒಂದು ಬದಲಾವಣೆ ಮಾಡಲಾಗಿದ್ದು, ಬಲಗೈ ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ತಂಡವನ್ನು ಸೇರ್ಪಡೆಯಾಗಿದ್ದಾರೆ. ಇವರಿಗಾಗಿ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಮಾಡಿರುವುದರ ಹೊರತಾಗಿಯೂ ಶಾರ್ದೂಲ್‌ ಅವಕಾಶ ವಂಚಿತರಾಗಿದ್ದಾರೆ. ಅತ್ತ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ.

ಅತ್ತ ಇಂಗ್ಲೆಂಡ್ ತಂಡದಲ್ಲಿ ಮೂರು ಬದಲಾವಣೆ ತರಲಾಗಿದ್ದು, ಕ್ರಾವ್ಲಿ ಬದಲು ಹಸೀಬ್ ಹಮೀದ್, ಸ್ಟುವರ್ಟ್ ಬ್ರಾಡ್ ಬದಲು ಮಾರ್ಕ್ ವುಡ್ ಮತ್ತು ಲಾರೆನ್ಸ್ ಬದಲಿಗೆ ಮೊಯಿನ್ ಅಲಿಗೆ ಅವಕಾಶ ಕಲ್ಪಿಸಲಾಗಿದೆ.

ಆಡುವ ಬಳಗ ಇಂತಿದೆ:

ಇಂಗ್ಲೆಂಡ್: ರೋರಿ ಬರ್ನ್ಸ್, ಡಾಮನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೋ, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಸ್ಯಾಮ್ ಕರ್ರನ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್ ಮತ್ತು ಜೇಮ್ಸ್ ಆ್ಯಂಡ್ರೆಸನ್.

ಭಾರತ: ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್‌ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಸಿರಾಜ್.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಟೆಸ್ಟ್ ಪಂದ್ಯಗಳ ಸರಣಿಯ ಪೈಕಿ ಮಳೆ ಬಾಧಿತ ಮೊದಲ ಟೆಸ್ಟ್ ಪಂದ್ಯವು ಡ್ರಾದಲ್ಲಿ ಅಂತ್ಯಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.