ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಆರಂಭವಾಗಿದ್ದು, ಇಂಗ್ಲೆಂಡ್ ಆರಂಭಿಕ ಆಘಾತ ಎದುರಿಸಿದೆ.
ಮಂಗಳವಾರ 429 ರನ್ ಗುರಿ ಬೆನ್ನತ್ತಿರುವ ಇಂಗ್ಲೆಂಡ್ ಪಡೆ 32 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 82 ರನ್ ಗಳಿಸಿದೆ.
ಡ್ಯಾನ್ ಲಾರೆನ್ಸ್ 26 ರನ್ ಗಳಿಸಿ ಆರ್.ಅಶ್ವಿನ್ ಸ್ಪಿನ್ ಬಲೆಗೆ ಬಿದ್ದರು. ಸದ್ಯ ಜೋ ರೂಟ್ ಔಟಾಗದೆ 15 ಹಾಗೂ ಬೆನ್ ಸ್ಟೋಕ್ಸ್ 7 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ಸೋಮವಾರ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ನೀಡಿರುವ 482 ರನ್ ಗುರಿ ಬೆನ್ನತ್ತಿರುವ ಇಂಗ್ಲೆಂಡ್‌ಗೆ ಆರಂಭದಲ್ಲೇ ಅಕ್ಷರ್ ಪಟೇಲ್ ಹಾಗೂ ಆರ್.ಅಶ್ವಿನ್ ಆಘಾತ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.