ಲೀಡ್ಸ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ನಾಯಕ ವಿರಾಟ್ ಕೊಹ್ಲಿ, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಲಾರ್ಡ್ಸ್‌ನಲ್ಲಿ ವಿಜೇತ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ. ಇದರಿಂದಾಗಿ ರವಿಚಂದ್ರನ್ ಅಶ್ವಿನ್ ಅವಕಾಶ ವಂಚಿತರಾಗಿದ್ದಾರೆ.
ಭಾರತ ಆಡುವ ಬಳಗಇಂತಿದೆ:
ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್‌ಪ್ರೀತ್ ಬೂಮ್ರಾ, ಮತ್ತು ಮೊಹಮ್ಮದ್ ಸಿರಾಜ್.
ಅತ್ತ ಇಂಗ್ಲೆಂಡ್ ತಂಡದಲ್ಲಿ ಎರಡು ಬದಲಾವಣೆ ತರಲಾಗಿದೆ. ಸಿಬ್ಲಿ ಹಾಗೂ ಮಾರ್ಕ್ ವುಡ್ ಸ್ಥಾನಗಳಿಗೆ ಕ್ರಮವಾಗಿ ಡೇವಿಡ್ ಮಲನ್ ಹಾಗೂ ಓವರ್‌ಟನ್ ಆಯ್ಕೆಯಾಗಿದ್ದಾರೆ.
ಇಂಗ್ಲೆಂಡ್ ಆಡುವ ಬಳಗ ಇಂತಿದೆ:
ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೋ, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಸ್ಯಾಮ್ ಕರ್ರನ್, ಕ್ರೇಗ್ ಓವರ್‌ಟನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡ್ರೆಸನ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.