ADVERTISEMENT

IND vs ENG 4ನೇ ಟಿ20: ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ 

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 13:28 IST
Last Updated 18 ಮಾರ್ಚ್ 2021, 13:28 IST
ರಾಯಿಟರ್ಸ್ ಚಿತ್ರ
ರಾಯಿಟರ್ಸ್ ಚಿತ್ರ   

ಅಹಮದಾಬಾದ್: ಇಲ್ಲಿ ನಡೆಯುತ್ತಿರುವ ನಾಲ್ಕನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಸರಣಿಯಲ್ಲಿ ಎರಡು ಪಂದ್ಯ ಗೆದ್ದಿರುವ ಇಂಗ್ಲೆಂಡ್ ತಂಡ 2–1ರಿಂದ ಮುನ್ನಡೆ ಸಾಧಿಸಿದೆ. ಭಾರತದಮಟ್ಟಿಗೆ ಇದು ಮಾಡು ಇಲ್ಲವೆ ಮಡಿ ಪಂದ್ಯವಾಗಿದ್ದು, ಸರಣಿ ಆಸೆ ಜೀವಂತವಾಗಿರಿಸಿಕೊಳ್ಳಲು ಈ ಪಂದ್ಯ ಗೆಲ್ಲಲೆಬೇಕಿದೆ.

ಸರಣಿಯುದ್ದಕ್ಕೂ ಟಾಸ್ ಪ್ರಮುಖ ಪಾತ್ರ ವಹಿಸಿದ್ದು, ಈ ಬಾರಿಯೂ ಟಾಸ್ ಸೋತ ಭಾರತ ಬ್ಯಾಟಿಂಗ್ ಆಹ್ವಾನ ಪಡೆದಿದೆ.

ADVERTISEMENT

ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಗಾಯಗೊಂಡಿರುವ ಇಶಾನ್ ಕಿಶನ್ ಬದಲಿಗೆ ಸೂರ್ಯಕುಮಾರ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ (ಕ್ಯಾಪ್ಟನ್), ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್, ಆರ್ ಚಹಾರ್

ಇಂಗ್ಲೆಂಡ್ ತಂಡ:ಜೇಸನ್ ರಾಯ್, ಜೋಸ್ ಬಟ್ಲರ್ , ಡೇವಿಡ್ ಮಲನ್, ಜಾನಿ ಬೈರ್‌ಸ್ಟೋ, ಇಯೊನ್ ಮೋರ್ಗಾನ್ (ಕ್ಯಾಪ್ಟನ್), ಬೆನ್ ಸ್ಟೋಕ್ಸ್, ಸ್ಯಾಮ್ ಕುರ್ರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.